Karnataka Weather : ಇಂದು ಸಂಜೆ ನಿಮ್ಮ ಜಿಲ್ಲೆಯಲ್ಲಿ ಮಳೆ ಬರುತ್ತಾ? 17 ಜಿಲ್ಲೆಗಳಿಗೆ ಹೈ ಅಲರ್ಟ್ – ಇಲ್ಲಿದೆ ಫುಲ್ ಲಿಸ್ಟ್!

Karnataka Weather : ರಾಜ್ಯದಲ್ಲಿ ಬೇಸಿಗೆ ಬಿಸಿಲ ನಡುವೆಯೇ ಮಳೆಯ ಅಬ್ಬರ ಜೋರಾಗಿದೆ. ಕಳೆದ 2 ದಿನಗಳಿಂದ ಹಲವು ಭಾಗಗಳಲ್ಲಿ ಮಳೆಯಾಗ್ತಿದ್ದು, ಮಾರ್ಚ್ 30ರವೆಗೂ ಮಳೆ ಮುಂದುವರೆಯಲಿದೆ. ಹೀಗಾಗಿ ಮತ್ತಷ್ಟು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಅಲರ್ಟ್ ನೀಡಿದೆ.
ಭಾರೀ ಮಳೆ ಸಾಧ್ಯತೆ
ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಸಹಿತ ಮಳೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ, ಕೆಲ ಭಾಗಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗಬಹುದು. ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

READ THIS : ಇಳಿಕೆಯಲ್ಲಿದ್ದ ಚಿನ್ನದ ದರದಲ್ಲಿಂದು ಮತ್ತೆ ಏರಿಕೆ – ರೇಟ್ ಚೆಕ್ ಮಾಡಿ
ಆಲಿಕಲ್ಲು ಸಹಿತ ಮಳೆ
ಉತ್ತರ ಕರ್ನಾಟಕದಲ್ಲಿ ಬೆಳಗಾವಿ, ಧಾರವಾಡ, ಹಾವೇರಿ ಭಾಗಗಳಲ್ಲಿ ಮಳೆ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಕೆಲ ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.
ಹವಾಮಾನ ಇಲಾಖೆ ಎಚ್ಚರಿಕೆ
- ಗುಡುಗು ಮಿಂಚಿನ ವೇಳೆ ಮರಗಳ ಕೆಳಗೆ ನಿಲ್ಲಬೇಡಿ.
- ವಾಹನ ಚಾಲನೆಯಾಗುವ ವೇಳೆ ಜಾಗರೂಕತೆ ವಹಿಸಿ.
- ರೈತರು ಮತ್ತು ಸಾರ್ವಜನಿಕರು ಭಾರೀ ಮಳೆಯೊಂದಿಗೆ ಬರುವ ಸಾಧ್ಯತೆಯ ಬಗ್ಗೆ ಎಚ್ಚರವಾಗಿರಬೇಕು.
ಯೆಲ್ಲೋ ಅಲರ್ಟ್ ಘೋಷಿತ ಜಿಲ್ಲೆಗಳು
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗಾಗಿ.

MUST WATCH : ಎತ್ತಿನಹೊಳೆ ಯೋಜನೆ TENDER ರದ್ದು – ಹನಿ ನೀರಿಗಾಗಿ ಗ್ರಾಮಸ್ಥರ ಪರದಾಟ




