ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ BCCI.

2026ರ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 28ರಂದು ಲೀಗ್ನ ಮೊದಲ ಪಂದ್ಯ ನಡೆಯಲಿದ್ದು, ಈ ಬಾರಿ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸುವ ಮೂಲಕ ಟೂರ್ನಿ ಸರಳವಾಗಿ ಆರಂಭಗೊಳ್ಳಲಿದೆ.
RCB VS SRH
ಬೆಂಗಳೂರಿನ ಎಂ.ಚನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಸಂಜೆ 7:30ಕ್ಕೆ ಆರಂಭವಾಗಲಿದೆ.

READ THIS : ಕ್ಲಾಸ್ ರೂಂನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಲೆಕ್ಚರರ್ಗೆ ಬಿತ್ತು ಚಪ್ಪಲಿ ಏಟು!
BCCI ಮಹತ್ವದ ನಿರ್ಧಾರ
ಪ್ರತಿ ವರ್ಷ ಐಪಿಎಲ್ ಆರಂಭಕ್ಕೂ ಮುನ್ನ ಭವ್ಯ ಉದ್ಘಾಟನಾ ಸಮಾರಂಭ ನಡೆಯುವುದು ಸಂಪ್ರದಾಯ. ಆದರೆ ಈ ಬಾರಿ BCCI ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ ಆರ್ಸಿಬಿಯ ವಿಜಯೋತ್ಸವದ ಮೆರವಣಿಗೆಯ ವೇಳೆ ಕಾಲ್ತುಳಿತ ಉಂಟಾಗಿ 11 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ಆ ಅವಘಡದಲ್ಲಿ ಮಡಿದವರ ಗೌರವಾರ್ಥವಾಗಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ಉದ್ಘಾಟನಾ ಸಮಾರಂಭ ರದ್ದಾಗುತ್ತಿರುವುದು ಇದೇ ಮೊದಲಲ್ಲ
ಆದಾಗ್ಯೂ ಐಪಿಎಲ್ ಉದ್ಘಾಟನಾ ಸಮಾರಂಭ ರದ್ದಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ಪಿಎಫ್ ಸೈನಿಕರ ಸ್ಮರಣಾರ್ಥ ಐಪಿಎಲ್ 2019 ರ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ನಿಗದಿಪಡಿಸಿದ ಹಣವನ್ನು ಹುತಾತ್ಮರ ಕುಟುಂಬಗಳಿಗೆ ವಿತರಿಸಲಾಗಿತ್ತು.

MUST WATCH : ನಿನ್ನಂಥ ಪುಡಿಗಳಿಗೆ ನಾನು ಹೆದರಲ್ಲ – MUNIRATHNA ವಿರುದ್ಧ ರೊಚ್ಚಿಗೆದ್ದ DKS




