Ramanagara ಜಿಲ್ಲೆಯ ಮಾಗಡಿ ತಾಲೂಕಿನ ಮರೂರು ಬಳಿ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದರೆ..

Ramanagara ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಈ ಘಟನೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳನ್ನು ಅಭಿಷೇಕ್ (21) ಮತ್ತು ಮನೋಜ್ (21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದು ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
MUST READ : IPL ಪಂದ್ಯ ಹಿನ್ನೆಲೆ ತಡರಾತ್ರಿ 2ರವರೆಗೆ Namma Metro ಸಂಚಾರ ವಿಸ್ತರಣೆ..!!

ನೈಟ್ ರೈಡ್ ವೇಳೆ ಸಂಭವಿಸಿದ ದುರಂತ
ಇದಕ್ಕೂ ಮೊದಲು, ಶುಕ್ರವಾರ ರಾತ್ರಿ ಮೂವರು ವಿದ್ಯಾರ್ಥಿಗಳು ಒಂದೇ ಬೈಕ್ನಲ್ಲಿ ಬೆಂಗಳೂರಿನಿಂದ ಕುಣಿಗಲ್ ಕಡೆಗೆ ನೈಟ್ ರೈಡ್ಗೆ ತೆರಳಿದ್ದರು. ಈ ವೇಳೆ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.

ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯ
ಅಪಘಾತದಲ್ಲಿ ನವೀನ್ ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದಲ್ಲದೆ, ಮೃತಪಟ್ಟ ವಿದ್ಯಾರ್ಥಿಗಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
MUST WATCH : TUMAKURU | ಬಡ ಮಕ್ಕಳಿಗಾಗಿ ಶೆಡ್ ಬಾಡಿಗೆಗೆ ಕೊಟ್ಟಿದ್ದೇ ನನಗೂ ಇದಕ್ಕೂ ಸಂಬಂಧ ಇಲ್ಲ ಎಂದ VALE CHNADRU




