ಬೆಂಗಳೂರಿನಿಂದ Tirupati ದರ್ಶನಕ್ಕೆ ಹೊರಟಿದ್ದ ಕುಟುಂಬದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ನಗರದಿಂದ Tirupati ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಈ ಘಟನೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತ ಸಂಭವಿಸಿದ ಸ್ಥಳ
ಅಪಘಾತವು ಬಂಗಾರುಪಾಳ್ಯಂ ಪಲಮಕುಲಪಲ್ಲಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಭೀಕರ ಡಿಕ್ಕಿಯ ಪರಿಣಾಮವಾಗಿ ಬೆಂಗಳೂರು ಮೂಲದ ದಂಪತಿ ಮತ್ತು ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ, ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
MUST READ : Ramanagara : ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು..!!

ಅಪಘಾತ ಸಂಭವಿಸಿದ್ದು ಹೇಗೆ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಪಲಮನೇರ್ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿತ್ತು. ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಬಸ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ , ಕಾರಿನೊಳಗೆ ಮೃತದೇಹಗಳು ಸಿಲುಕಿಕೊಂಡಿದ್ದವು ನಂತರ ಪೊಲೀಸರು ಜೆಸಿಬಿ ಯಂತ್ರದ ಸಹಾಯದಿಂದ ಕಾರನ್ನು ಹೊರತೆಗೆದಿದ್ದಾರೆ.

ಅಪಘಾತಕ್ಕೆ ಕಾರಣ ಏನು?
ಇದಕ್ಕೂ ನಡುವೆ, ಪ್ರಾಥಮಿಕ ತನಿಖೆಯಲ್ಲಿ ಅತಿ ವೇಗದ ಚಾಲನೆ (Overspeeding) ಅಪಘಾತಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
ಮಾಹಿತಿಯಂತೆ, ಬೆಂಗಳೂರಿನಲ್ಲಿ ವಾಸವಿದ್ದ ಈ ಕುಟುಂಬವು ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ದರ್ಶನಕ್ಕೆ ಟಿಕೆಟ್ ಪಡೆದಿತ್ತು. ಆದರೆ, ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಸದ್ಯ ಪೊಲೀಸರು ಮೃತರಾದ ಬೆಂಗಳೂರು ಮೂಲದ ಕುಟುಂಬದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
MUST WATCH : TUMAKURU | ಬಡ ಮಕ್ಕಳಿಗಾಗಿ ಶೆಡ್ ಬಾಡಿಗೆಗೆ ಕೊಟ್ಟಿದ್ದೇ ನನಗೂ ಇದಕ್ಕೂ ಸಂಬಂಧ ಇಲ್ಲ ಎಂದ VALE CHNADRU




