Tumkur Dasara Festival: Muralidhar Halappa Invites All”Chikkanayakanahalli

ಚಿಕ್ಕನಾಯಕನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ, ತಾಲೂಕು ಮಟ್ಟದಲ್ಲಿ ನಡೆದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ ಕಾರ್ಯಕ್ರಮದಲ್ಲಿ, ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳಿಧರ್ ಹಾಲಪ್ಪ ಅವ್ರು, ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನ ವಿತರಣೆ ಮಾಡುವ ಮೂಲಕ ತುಮಕೂರು ದಸರಾ ಉತ್ಸವಕ್ಕೆ ಎಲ್ರಿಗೂ ವಿಶೇಷ ಆಹ್ವಾನ ನೀಡಿದ್ರು.
ಇನ್ನು ಈ ವೇಳೆ ಮಾತನಾಡಿದ ಮುರುಳಿಧರ್ ಹಾಲಪ್ಪ ಅವರು ಹಿಂದಿನ ಕಾಲದಲ್ಲಿ ಶಿಕ್ಷಣಕ್ಕಿರುವ ಮಹತ್ವ ಅನನ್ಯವಾಗಿದ್ದು, ವಿದ್ಯಾರ್ಥಿಗಳು ಸ್ಪಷ್ಟ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡ್ಬೇಕು ಎಂದ್ರು. ಇನ್ನು ದಸರಾ ನೋಡಲು ಮೈಸೂರು ಅಥವಾ ಮಂಗಳೂರಿಗೆ ಹೋಗುವ ಅವಶ್ಯಕತೆ ಇಲ್ಲ. ನಮ್ಮ ತುಮಕೂರಿನಲ್ಲೇ ರಾಜ್ಯದ ಖ್ಯಾತ ಕಲಾ ತಂಡಗಳು ತಮ್ಮ ಕಲೆಯನ್ನು ಪ್ರದರ್ಶನ ಮಾಡಲಿವೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಟ ವಿ. ರವಿಚಂದ್ರನ್, ಮೋಹಕ ತಾರೆ ರಮ್ಯಾ ಸೇರಿದಂತೆ ಅನೇಕ ಗಣ್ಯರು ದಸರಾ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಇಲ್ಲಿನ ಎಲ್ಲಾ ಮಕ್ಕಳು ಹಾಗೂ ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಮ್ಮ ತುಮಕೂರು ದಸರಾವನ್ನು ಯಶಸ್ವಿಗೊಳಿಸೋಣ” ಎಂದು ಕರೆ ನೀಡಿದ್ರು.
ಇನ್ನು ಪ್ರಾಂಶುಪಾಲರಾದ ಡಾ. ಜ್ಯೋತಿ ಎಂಬುವರು ಮಾತನಾಡಿ, ಸರ್ಕಾರಿ ಕಾಲೇಜಿನಲ್ಲಿ ಕೌಶಲ್ಯಪತ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿದ್ದು, ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಉತ್ತಮ ಬಹುಮಾನವನ್ನ ನೀಡಲಾಗಿದೆ. ಇಂತಹ ಉಪಯುಕ್ತ ಕಾರ್ಯಕ್ರಮಗಳು ಡಾ. ಮುರುಳಿಧರ್ ಹಾಲಪ್ಪ ರವರಿಂದ ಮತ್ತಷ್ಟು ನಡೆಯಬೇಕೆಂದು ಆಶಯ ವ್ಯಕ್ತಪಡಿಸಿದ್ರು.




