Hassan ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರ ಬಳಿ ರಸ್ತೆ ದಾಟುತ್ತಿದ್ದ SSLC ವಿದ್ಯಾರ್ಥಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

Hassan ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಈ ಘಟನೆ Holenarasipur ತಾಲೂಕಿನ ಕಾಮಸಮುದ್ರ ಸಮೀಪ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ. ಅವರು ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಬಸ್ ಮೂಲಕ ತಮ್ಮ ಊರಿಗೆ ಬಂದಿದ್ದರು. ಪರೀಕ್ಷೆ ಮುಗಿಸಿ ಮನೆಗೆ ತೆರಳುವ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
MUST READ : IPL ಪಂದ್ಯ ಹಿನ್ನೆಲೆ ತಡರಾತ್ರಿ 2ರವರೆಗೆ Namma Metro ಸಂಚಾರ ವಿಸ್ತರಣೆ..!!

ಪ್ರತ್ಯಕ್ಷದರ್ಶಿಗಳ ಪ್ರಕಾರ, ಅತಿಯಾದ ವೇಗ ಮತ್ತು ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಲಾಗಿದೆ. ಈ ದುರ್ಘಟನೆ Holenarasipur Town Police Station ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
MUST WATCH : TUMAKURU | ಬಡ ಮಕ್ಕಳಿಗಾಗಿ ಶೆಡ್ ಬಾಡಿಗೆಗೆ ಕೊಟ್ಟಿದ್ದೇ ನನಗೂ ಇದಕ್ಕೂ ಸಂಬಂಧ ಇಲ್ಲ ಎಂದ VALE CHNADRU




