Yadgir : ರಾಜ್ಯದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಮೊನ್ನೆಯಷ್ಟೇ ದುರ್ಮರಣ ಹೊಂದಿದ ಘಟನೆ ಮಾಸುವ ಮುನ್ನವೇ ಅಂತಹುದ್ದೇ ಮತ್ತೊಂದು ಅವಘಡ ರಾಜ್ಯದಲ್ಲೀಗ ನಡೆದಿದೆ.

READ THSI : ರಾಜ್ಯದಲ್ಲಿ ಬೇಸಿಗೆ ಜೊತೆ ಮಳೆ ಅಬ್ಬರ – ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ
ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ Yadgir ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಕಿರಣ್ (6), ಬಸಮ್ಮ (11), ಶರತ್ (6) ಹಾಗೂ ಹನುಮೇಶ್ (7) ಎಂದು ಗುರುತಿಸಲಾಗಿದೆ.

ಸಂಬಂಧಿಕರಿಗೆ ತೀವ್ರ ಆಘಾತ – Yadgir
ಶಾಲೆಗೆ ರಜೆ ಇದ್ದ ಹಿನ್ನೆಲೆ ಈ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ. ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೋಷಕರು ಮತ್ತು ಸಂಬಂಧಿಕರಿಗೆ ತೀವ್ರ ಆಘಾತವಾಗಿದೆ. ಈ ಘಟನೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
MUST WATCH : ಬಂಡೆ ಕಳ್ಳರಿಂದ ಇದೆಂಥಾ ಕಳ್ಳಾಟ- ದಂಧೆಕೋರರಿಂದ ಸರ್ಕಾರಿ ಜಾಗದಲ್ಲಿ ಗ್ರಾನೈಟ್ಗಳನ್ನ ಕದ್ದು ಮಾರಾಟ




