Bengaluru ಗಾಂಧೀನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಿಜಿಸ್ಟ್ರಾರ್ರನ್ನು ಪೊಲೀಸರು ಬಂಧಿಸಿದ್ದಾರೆ.

Bengaluru ಗಾಂಧೀನಗರದಲ್ಲಿರುವ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಿಜಿಸ್ಟ್ರಾರ್ರನ್ನು ಪೊಲೀಸರು ಬಂಧಿಸಿದ್ದಾರೆ. ನೊಂದ ಮಹಿಳೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಚೇರಿಯಲ್ಲಿ ಕೆಲಸ ಮಾಡುವ ವೇಳೆ ರಿಜಿಸ್ಟ್ರಾರ್ ಮಲ್ಲು ಅವರು ಅನೇಕ ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
MUST READ : Shivakumara ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ..!!

ಸಂತ್ರಸ್ತೆಯ ದೂರಿನ ಪ್ರಕಾರ, ಅವರು ಕೆಲಸದ ಸಮಯದಲ್ಲಿ ಬಲವಂತವಾಗಿ ಅಂಗಾಂಗ ಮುಟ್ಟುವುದು, ಎಳೆದಾಡುವುದು ಹಾಗೂ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಕಚೇರಿ ಹೊರಭಾಗದಲ್ಲಿ ಕಾರಿನ ಬಳಿ ಬಲವಂತವಾಗಿ ತಬ್ಬಿಕೊಂಡು ಮುತ್ತು ಕೊಡಲು ಯತ್ನಿಸಿದ್ದು, ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
MUST WATCH : MUST WATCH : ಸಿದ್ದಗಂಗಾ ಶ್ರೀಗಳ ಜನ್ಮೋತ್ಸವದಂದು ಮಠದಲ್ಲಿ ಹಳೆ ವಿದ್ಯಾರ್ಥಿ ಸಾ* | TUMKURU NEWS |




