Belagavi : ಮುಂಬೈನಿಂದ ದಾವಣಗೆರೆಗೆ ಸೇಬು ಸಾಗಿಸುತ್ತಿದ್ದ ಗೂಡ್ಸ್ ವಾಹನ ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ…

Belagavi : ಸೇಬು ಸಾಗಿಸುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸೇಬು ಹಣ್ಣಿನ ಬಾಕ್ಸ್ಗಳು ರಸ್ತೆ ಪಾಲಾಗಿವೆ.
ಗೂಡ್ಸ್ ವಾಹನ ಮುಂಬೈನಿಂದ ದಾವಣಗೆರೆಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿತ್ತು. ಆದರೆ ಬೆಳಗಾವಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ಪಲ್ಟಿಯಾಗಿದೆ.
ಈ ವೇಳೆ ವಾಹನದಲ್ಲಿದ್ದ ಸೇಬು ಹಣ್ಣಿನ ಬಾಕ್ಸ್ಗಳು ರಸ್ತೆಗೆ ಚದರಿಬಿದ್ದಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ಪರಿಸ್ಥಿತಿ ಉಂಟಾಯಿತು.
MUST READ : ಬಕೆಟ್ನಲ್ಲಿ ಮುಳುಗಿ ಮಗು ಸಾವು – ಶಾಕ್ಗೆ ಒಳಗಾಗಿ ತಾಯಿ Suicide..!!
ಚಾಲಕನಿಗೆ ಸಣ್ಣಪುಟ್ಟ ಗಾಯ
ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ.
ವಾಹನ ಪಲ್ಟಿಯಾದ ಪರಿಣಾಮ ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾದರೂ, ನಂತರ ವಾಹನವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.
ಪೊಲೀಸರ ಭೇಟಿ – ಪರಿಶೀಲನೆ ಮುಂದುವರಿಕೆ
ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
MUST WATCH : 🔴LIVE | ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರ- ಗೆಲ್ಲೋ ಅಭ್ಯರ್ಥಿ ಯಾರು? | DAVANAGERE BY-ELECTION |




