Chikkaballapura ದ ಶೆಟ್ಟಿಗೆರೆ ಕ್ರಾಸ್ ಬಳಿ ಕಾರು ಕಂಟೇನರ್ಗೆ ಡಿಕ್ಕಿಯಾಗಿ ನವವಿವಾಹಿತೆ ಮತ್ತು ಸಂಬಂಧಿ ಸಾವನ್ನಪ್ಪಿದ್ದಾರೆ.

Chikkaballapura ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ಭೀಕರ ಅಪಘಾತದಲ್ಲಿ ನವವಿವಾಹಿತೆ ಹಾಗೂ ಅವರ ಸಂಬಂಧಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದಿನಿಂದ ಕಂಟೇನರ್ಗೆ ಡಿಕ್ಕಿ
ಚಿಕ್ಕಬಳ್ಳಾಪುರದ ಶೆಟ್ಟಿಗೆರೆ ಕ್ರಾಸ್ ಬಳಿ ಕಾರು ಹಿಂದಿನಿಂದ ಸಾಗುತ್ತಿದ್ದ ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆ ಕಾರಣದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.
5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ
ಮೃತರನ್ನು ರಕ್ಷಿತಾ ರೆಡ್ಡಿ (28) ಮತ್ತು ಸಂಬಂಧಿ ಪವನ್ ರೆಡ್ಡಿ (30) ಎಂದು ಗುರುತಿಸಲಾಗಿದೆ. ರಕ್ಷಿತಾ ರೆಡ್ಡಿ ಮತ್ತು ಅವರ ಪತಿ ರಾಜಶೇಖರ ರೆಡ್ಡಿ ಕಳೆದ 5 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಇಬ್ಬರೂ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
MUST READ : ಬಕೆಟ್ನಲ್ಲಿ ಮುಳುಗಿ ಮಗು ಸಾವು – ಶಾಕ್ಗೆ ಒಳಗಾಗಿ ತಾಯಿ Suicide..!!

ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತ
ದಂಪತಿ ತಮ್ಮ ಸಂಬಂಧಿಯೊಂದಿಗೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಸ್ವಗ್ರಾಮ ಅವಳಗಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಶೆಟ್ಟಿಗೆರೆ ಕ್ರಾಸ್ ಬಳಿ ಕಂಟೇನರ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತಿ ರಾಜಶೇಖರ ರೆಡ್ಡಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ತನಿಖೆ – ಪ್ರಕರಣ ದಾಖಲು
ಈ ಘಟನೆ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
MUST WATCH : 🔴LIVE | ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರ- ಗೆಲ್ಲೋ ಅಭ್ಯರ್ಥಿ ಯಾರು? | DAVANAGERE BY-ELECTION |

