Koratagere : ನೇಣು ಬಿಗಿದುಕೊಂಡು ಯುವಕ Suicide!

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿ ಸಾಲಬಾಧೆಯಿಂದ ಮನನೊಂದ ಯುವಕನೋರ್ವ Suicide ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ರವಿಕುಮಾರ್ (29) ಎಂದು ಗುರುತಿಸಲಾಗಿದೆ.
ನೇಣು ಬಿಗಿದುಕೊಂಡು Suicide!
ರವಿಕುಮಾರ್ ವೃತ್ತಿಯಲ್ಲಿ ಕ್ಷೌರಿಕನಾಗಿದ್ದು, ಗ್ರಾಮದಲ್ಲಿ ಸಣ್ಣ ಮಟ್ಟದ ಅಂಗಡಿ ನಡೆಸುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು ವಿವಿಧ ಮೂಲಗಳಿಂದ ಸಾಲ ಮಾಡಿದ್ದರು ಎನ್ನಲಾಗಿದೆ. ಆದರೆ ಆದಾಯ ಕಡಿಮೆಯಾಗಿದ್ದು, ಸಾಲದ ಒತ್ತಡ ದಿನೇ ದಿನೇ ಹೆಚ್ಚಾಗುತ್ತಿದ್ದ ಹಿನ್ನೆಲೆ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ರವಿಕುಮಾರ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
RAED THIS : ಕಂಟೇನರ್ಗೆ ಕಾರು Accident – ನವವಿವಾಹಿತೆ ಸೇರಿ ಇಬ್ಬರು ಸಾವು..!

ಆರ್ಥಿಕ ನೆರವು ಒದಗಿಸಬೇಕೆಂದು ಆಗ್ರಹ
ಇನ್ನು ಘಟನೆ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನು ಗ್ರಾಮಸ್ಥರು ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಸಾಲದ ಒತ್ತಡದಿಂದ ಬಳಲುತ್ತಿರುವ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

MUST WATCH : ಗ್ರಾ ಪಂಚಾಯ್ತಿಯಲ್ಲಿ ಇದೆಂಥಾ ಕರ್ಮಕಾಂಡ? – ಅಧಿಕಾರಿಗಳೇ ಇಲ್ಲಿ ಕಿಂಗ್ ಮೇಕರ್ಸ್..!




