
VIJAYANAGARA CYLINDER BLAST : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಗಾದಿಗನೂರು ಗ್ರಾಮದಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಜನರಿಗೆ ಗಾಯವಾಗಿದೆ. ಘಟನೆ ಸಮಯದಲ್ಲಿ ಎಲ್ಲರೂ ಮನೆ ಒಳಗೆ ಇದ್ದರು. ಸ್ಫೋಟದ ತೀವ್ರತೆಗೆ ಮನೆ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇನ್ನು ಗಾಯಾಳುಗಳನ್ನು ತಕ್ಷಣ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಕಗಳಿಂದ ತಿಳಿದು ಬಂದಿದೆ.




