ಶಿವಮೊಗ್ಗದಲ್ಲಿ ಐದು ತಿಂಗಳ ಗರ್ಭಿಣಿ ಸೊಸೆಯನ್ನು ಪೆಟ್ರೋಲ್ ಸುರಿದು Murder ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ನೀಡಿ 5 ತಿಂಗಳ ಗರ್ಭಿಣಿ ಸೊಸೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ Murder ಮಾಡಿರುವ ಘಟನೆ ನಡೆದಿದೆ. ಇನ್ನು ಈ ಘಟನೆ ಸಂಬಂಧ ಸೊರಬ ಠಾಣೆಯ ಪೊಲೀಸರು ಮೃತಳ ಅತ್ತೆ, ಮಾವ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೆಟ್ರೋಲ್ ಸುರಿದು ಗರ್ಭಿಣಿ ಸೊಸೆಯನ್ನೇ ಕೊಂದ್ರು
ನವೀನ್ ಎಂಬುವವರ ಪತ್ನಿ ವೃತ್ತಿಯಲ್ಲಿ ಸ್ಟಾಫ್ ನರ್ಸ್ ಆಗಿದ್ದಶ್ವೇತಾ (30) ಕೊಲೆಯಾದ ದುರ್ದೈವಿ. ಶ್ವೇತಾ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು ಎನ್ನಲಾಗಿದೆ.
ಮಾರ್ಚ್ 30ರಂದು ಗಂಡನ ಮನೆಯಲ್ಲಿ ಶ್ವೇತಾ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿತ್ತು. ತೀವ್ರವಾಗಿ ಸುಟ್ಟಗಾಯಗಳಾಗಿದ್ದ ಅವರನ್ನು ಕೂಡಲೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಏಪ್ರಿಲ್ 1 ರಂದು ಶ್ವೇತಾ ಕೊನೆಯುಸಿರೆಳೆದಿದ್ದಾರೆ.

READ THIS : ಬಾವಿಗೆ ಉರುಳಿದ ಕಾರು – ಒಂದೇ ಕುಟುಂಬದ 9 ಮಂದಿ ದಾರುಣ ಸಾವು!
ನಾಲ್ವರು ಅರೆಸ್ಟ್!
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊರಬ ಠಾಣೆಯ ಪೊಲೀಸರು ವರದಕ್ಷಿಣೆ ಕಿರುಕುಳ ಹಾಗೂ ಹತ್ಯೆ ಆರೋಪದಡಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಮೃತಳ ಮಾವ ಸಣ್ಣಪ್ಪ, ಅತ್ತೆ ಜಾನಕಿ, ಪತಿಯ ಅಣ್ಣ ಹೇಮಂತ್ ಹಾಗೂ ಅವರ ಪತ್ನಿದಿವ್ಯಾ ಸೇರಿದ್ದಾರೆ.
ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ
ಅಂತ್ಯಕ್ರಿಯೆ ಮುಗಿಯುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶ್ವೇತಾ ಅವರು ಉಳವಿ ಗ್ರಾಮದ ಮಂಜಪ್ಪ ಮತ್ತು ನಾಗರತ್ನ ದಂಪತಿಯ ಪುತ್ರಿಯಾಗಿದ್ದು, ಉಳವಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 2020ರಲ್ಲಿ ಶ್ವೇತ ನವೀನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇನ್ನು ಈ ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಇದೆ.

5 ತಿಂಗಳ ಕಂದಮ್ಮ ಅನಾಥ
ಶ್ವೇತ ಹೊಟ್ಟೆಯಲ್ಲಿದ್ದ 5 ತಿಂಗಳ ಕಂದಮ್ಮ ಅನಾಥವಾದ ಪುಟ್ಟ ಮಗಳ ಭವಿಷ್ಯಕ್ಕೆ ನ್ಯಾಯ ಸಿಗಬೇಕು ಎಂದು ಪೋಷಕರ ಆಗ್ರಹವಾಗಿದೆ.
MUST WATCH : GOLD, SILVER ಬೆಲೆಯಲ್ಲಿ ಮತ್ತೆ ಏರಿಕೆ – ಇವತ್ತಿನ ಬೆಲೆ ಎಷ್ಟಾಗಿದೆ ಗೊತ್ತಾ ?




