Ballari ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ 3 ವರ್ಷದ ಗಂಡು ಚಿರತೆ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದೆ…

Ballari ಜಿಲ್ಲೆಯಲ್ಲಿ ವನ್ಯಜೀವಿ ಸಂಬಂಧಿತ ದುರ್ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ 3 ವರ್ಷದ ಗಂಡು ಚಿರತೆ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತ
ಈ ಘಟನೆ 50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ತಿಮ್ಮಲಾಪುರ ಗ್ರಾಮದ ಬಳಿ ಸಂಭವಿಸಿದೆ. ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಅದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಅಂದಾಜು 3 ವರ್ಷದ ಗಂಡು ಚಿರತೆಯ ಮೃತದೇಹವನ್ನು ಸಿಬ್ಬಂದಿ ಗಸ್ತಿಗೆ ತೆರಳಿದ ಸಮಯದಲ್ಲಿ ಕಂಡು ಪ್ರಕರಣ ಬೆಳಕಿಗೆ ಬಂದಿದೆ.
MUST READ : ವರದಕ್ಷಿಣೆಗಾಗಿ ಪೆಟ್ರೋಲ್ ಸುರಿದು ಗರ್ಭಿಣಿ ಸೊಸೆಯನ್ನೇ ಕೊಂದ ಅತ್ತೆ- ಮಾವ

ಅರಣ್ಯ ಇಲಾಖೆಯಿಂದ ಪ್ರಕರಣ ದಾಖಲು
ಘಟನೆ ಕುರಿತು ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಚಿಲಕನಹಟ್ಟಿ ಶಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಡಿ ವನ್ಯಜೀವಿ ಅಪರಾಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಅರಣ್ಯ ಪ್ರದೇಶದಲ್ಲಿ ವಿಲೇವಾರಿ
ಮೃತ ಚಿರತೆಯ ಸಾವಿನ ನಿಖರ ಕಾರಣ ತಿಳಿಯಲು ಪಶುವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಂತರ ಕಾನೂನು ಪ್ರಕಾರ ಚಿರತೆಯ ಮೃತದೇಹವನ್ನು ಅರಣ್ಯ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗಿದೆ.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ. ಭಾಸ್ಕರ್ ಹಾಗೂ ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MUST WATCH : FATHER MURDER HIS SON | ಕಟ್ಟಿಕೊಳ್ಳಬೇಕಾಗಿದ್ದವಳೇ ವಿಲನ್ ಆದ್ಳು- ಮದುವೆ ಖುಷಿಯಲ್ಲಿದ್ದ ಮದುಮಗನ ಭೀಕರ ಹತ್ಯೆ




