Karnataka Weather : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಳ – ಹವಾಮಾನ ಇಲಾಖೆಯಿಂದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ಈ ಬಾರಿ ಬೇಸಿಗೆ ಅವಧಿಯಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಬ್ಬರಿಸುತ್ತಿದೆ. ಇಂದು ಸಹ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ವರುಣ ಈಗ ಮತ್ತೆ ತನ್ನ ಕೆಲಸ ಆರಂಭ ಮಾಡಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಆಗ್ತಿದ್ದು, ಭಾರೀ ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಬಿಸಿಲಿದೆ. ಅದ್ರಲ್ಲೂ ಉತ್ತರ ಕರ್ನಾಟಕದ ಜನರು ಬಿಸಿಲಿಗೆ ಮನೆಯಿಂದ ಆಚೆ ಬಾರದಂತೆ ಆಗಿದೆ. ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು 22 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ.

READ THIS : Kalburgi|ಭೀಮಾ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು
ಮಳೆಯ ತೀವ್ರತೆ ಹೆಚ್ಚಿರಲಿದೆ – Karnataka Weather
ಇನ್ನು ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಒಟ್ನಲ್ಲಿ ಒಂದೆಡೆ ಮಳೆ ಸುರಿದ್ರೆ, ಇನ್ನೊಂದೆಡೆ ರಾಜ್ಯದ ಕೆಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚುತ್ತಿದೆ.

MUST WATCH : IRAN ಮೇಲೆ AMERICA ಭೀಕರ ದಾಳಿ – ಸೇತುವೆಗಳು, ಕಟ್ಟಡಗಳು ಪುಡಿ ಪುಡಿ..!




