ಇಂದು RCB vs CSK ಹೈವೋಲ್ಟೇಜ್ ಕದನ – ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೆಚ್ಚಿನ ಭದ್ರತೆ.

ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್ನ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಹೈವೋಲ್ಟೇಜ್ ಕದನಕ್ಕೆ ಸಜ್ಜಾಗಿದೆ. RCB ಈಗಾಗಲೇ ಮೊದಲ ಪಂದ್ಯ ಗೆದ್ದು ಶುಭಾರಂಭ ಕಂಡಿದ್ರೆ, ಚೆನ್ನೈ ತಂಡ ಈ ಸೀಸನ್ನಲ್ಲಿ ತನ್ನ ಖಾತೆ ತೆರೆದಿಲ್ಲ. ಹೀಗಾಗಿ ಇಂದಿನ ಪಂದ್ಯಕ್ಕೆ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿದೆ.

ಬೆಂಗಳೂರಿನಲ್ಲಿ RCB vs CSK ಹಣಾಹಣಿ
ಐಪಿಎಲ್ 2026ರ ಸೀಸನ್ ಭರ್ಜರಿಯಾಗಿ ನಡೆಯುತ್ತಿದೆ. ಅದ್ರಲ್ಲೂ ಆರ್ಸಿಬಿ ಮತ್ತು ಸಿಎಸ್ಕೆ ಮ್ಯಾಚ್ ಅಂದ್ರನೇ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್. ಇನ್ನು ಕಳೆದ ಆವೃತ್ತಿಯಲ್ಲಿ ಲೀಗ್ನ ಎರಡು ಪಂದ್ಯಗಳಲ್ಲಿ ಆರ್ಸಿಬಿ ವಿರುದ್ದ ಸೋತಿದ್ದ ಚೆನ್ನೈ ತಂಡ ಸೇಡು ತೀರಿಸಿಕೊಳ್ಳುವ ಜೊತೆಗೆ ಈ ಆವೃತ್ತಿಯಲ್ಲಿ ಮೊದಲ ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. ಆದ್ರೆ ಮೊದಲ ಪಂದ್ಯದಲ್ಲೇ ಅಬ್ಬರಿಸಿರುವ ಹಾಲಿ ಚಾಂಪಿಯನ್ಸ್ ಆರ್ಸಿಬಿ ಸಿಎಸ್ಕೆ ವಿರುದ್ದ ಮತ್ತೊಂದು ಗೆಲುವು ಸಾಧಿಸಲು ಸಜ್ಜಾಗಿದೆ.

READ THIS : ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್ – ಪ್ರೀತಿಸುವ ನಾಟಕವಾಡಿ ಅತ್ಯಾಚಾರ!
ಆಡಿದ ಎರಡೂ ಪಂದ್ಯಗಳಲ್ಲೂ ಸೋಲು
ಇನ್ನು ಈ ಸೀಸನ್ನ ಮೊದಲ ಪಂದ್ಯದಲ್ಲೇ ಭರ್ಜರಿ ಜಯ ಸಾಧಿಸಿರುವ ಆರ್ಸಿಬಿ ತಂಡ, ಅದೇ ಲಯವನ್ನ ಮುಂದುವರಿಸುವ ಗುರಿ ಹೊಂದಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟೀದಾರ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಮತ್ತೊಂದೆಡೆ ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್ಕೆ ತಂಡ ಆಡಿದ ಎರಡು ಪಂದ್ಯಗಳಲ್ಲಿ ಸೋಲನುಭವಿಸಿ ಸಂಕಷ್ಟದಲ್ಲಿದೆ. ಹೀಗಾಗಿ ಎರಡು ತಂಡಗಳು ಹಣಾಹಣಿಗೆ ಸಜ್ಜಾಗಿದೆ.

ಕ್ರೀಡಾಂಗಣದಲ್ಲಿ ಹೆಚ್ಚಿನ ಭದ್ರತೆ
ಒಟ್ನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವರ್ಸಸ್ ಚೆನ್ನೈ ಸೂಪರ್ ಕಿಂಗ್ಸ್ ನಡುವಿನದು ಹೈವೋಲ್ಟೇಜ್ ಪಂದ್ಯವಾಗಿರೋದ್ರಿಂದ ಅಭಿಮಾನಿಗಳು ಕಿಕ್ಕಿರಿದು ಸೇರಲಿದ್ದಾರೆ.
ಹೀಗಾಗಿ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನ ಕೈಗೊಂಡಿದೆ. ಇಂದಿನ ಪಂದ್ಯದ ಮೇಲೆ ಇಡೀ ಕ್ರಿಕೆಟ್ ಲೋಕದ ಕಣ್ಣು ನೆಟ್ಟಿದೆ.

MUST WATCH : ಮದುವೆ ಆಗದಿದ್ದಕ್ಕೆ ಮಸಣ ಸೇರಿದ್ರು ಇಬ್ಬರು ಯುವಕರ ಕಣ್ಣೀರ ಕಥೆ ಕೇಳಿ




