KSRTC ಹಾಗೂ ಖಾಸಗಿ ಬಸ್ ನಡುವೆ ಡೆಡ್ಲಿ Accident – ಇಬ್ಬರು ಪ್ರಯಾಣಿಕರು ಸಾವು, 20 ಮಂದಿ ಪ್ರಯಾಣಿಕರಿಗೆ ಗಾಯ.

ಇತ್ತೀಚಿನ ದಿನಗಳಲ್ಲಿ ಶಿರಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಫಘಾತಗಳು ಸಂಭವಿಸುತ್ತಿದ್ದು, ಹಲವು ಮಂದಿ ಪ್ರಯಾಣಿಕರು ಸಾವನ್ನಪ್ಪುತ್ತಿದ್ದಾರೆ. ಇದೀಗ KSRTC ಬಸ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ರೆ, 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್!
ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಶಿರಾ ಬೈಪಾಸ್ ಬಳಿ ಹಾದುಹೋಗಿರುವ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ Accident ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ರೆ, ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ನಲ್ಲಿ ಇದ್ದ ಸುಮಾರು 20 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ದೃಶ್ಯ ಮತ್ತೊಂದು ಬಸ್ನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ಬಳಿಕ ಗಾಯಾಳುಗಳು ರಸ್ತೆ ಬದಿ ಬಿದ್ದು ಒದ್ದಾಡಿರುವ ದೃಶ್ಯ ಭಯಾನಕವಾಗಿತ್ತು.
READ THIS : ಇಂದು ಧೋನಿ ಇಲ್ಲದ ಚೆನ್ನೈಗೆ RCB ಸವಾಲು – ಗೆಲ್ಲೋರು ಯಾರು?

Accident – ಶಿರಾ ಪೊಲೀಸರು ಭೇಟಿ, ಪರಿಶೀಲನೆ
ಓವರ್ ಟೇಕ್ ಮಾಡಲು ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ಆರೋಪ ಮಾಡ್ತಾ ಇದ್ದಾರೆ. ಇನ್ನು ಅಪಘಾತದಲ್ಲಿ ಮೃತಪಟ್ಟವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

MUST WATCH : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – 22 ಜಿಲ್ಲೆಗಳಿಗೆ YELLOW ALERT..!




