Rain Alert : ರಾಜ್ಯದ ಹಲವೆಡೆ ಏ.7ರ ವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ.

Rain Alert : ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಏಪ್ರಿಲ್ 7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.
ಯವ್ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತೆ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬಿರುಗಾಳಿ ಸಹಿತ ಬಾರೀ ಮಳೆಯಾಗುವ ಜಿಲ್ಲೆಗಳು
ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾ ಇಲಾಖೆ ತಿಳಿಸಿದೆ.
READ THIS : ಬಸ್ಗಳ ಮಧ್ಯೆ ಭೀಕರ Accident – ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ
ಬೆಂಗಳೂರಿನಲ್ಲಿ ಏಷ್ಟಿದೆ ತಾಪಮಾನ?
ಇನ್ನು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ಯಾದಗಿರಿಯಲ್ಲಿ ದಾಖಲಾಗಲಿದ್ದು, ಇಲ್ಲಿ 37 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕಲಬುರ್ಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ಇರಲಿದೆ.

ತುಮಕೂರಿನಲ್ಲೂ ಮಳೆ ಮುನ್ಸೂಚನೆ
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೂ ಗಾಳಿ-ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
MUST WATCH : ಕೆಲವೇ ಕ್ಷಣಗಳಲ್ಲಿ ದಾವಣಗೆರೆ ಅಖಾಡಕ್ಕೆ ಜಮೀರ್ ಚುನಾವಣಾ ಪ್ರಚಾರದ ಬಗ್ಗೆ ಸಚಿವ ಏನಂದ್ರು




