
ರಾಜ್ಯದಲ್ಲಿ ಅತಿಥಿ ಉಪನ್ಯಾಕರ ನೇಮಕಾತಿ ಸಂಬಂಧ ಹೈಕೋರ್ಟ್ ಆದೇಶದ ಅನ್ವಯ ಕ್ರಮ ಕೈಗೊಳ್ಳದೇ ವಿಳಂಬ ನೀತಿ ಅನುಸರಿಸುತ್ತಿರೋ ಸರ್ಕಾರದ ನಡೆ ಖಂಡಿಸಿ ತುಮಕೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊಹಾಕಿದ್ರು.

: ತುಮಕೂರು ನಗರದ ಟೌನ್ ಹಾಲ್ ಸರ್ಕಲ್ಗೆ ಜಮಯಿಸಿದ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ, ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ರಾಜ್ಯದಲ್ಲಿ ಖಾಲಿ ಇರೋ 12 ಸಾವಿರ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, 55 ಸಾವಿರ ಅರ್ಜಿಗಳು ಸಲ್ಲಿಕೆ ಆಗಿವೆ. ಆದ್ರೆ ಈವರೆಗೂ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ತರಗತಿ ಪ್ರಾರಂಭವಾಗಿ 2 ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಸರಿಯಾದ ತರಗತಿಗಳು ನಡೆಯುತ್ತಿಲ್ಲ ಇದ್ರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಅಗ್ತಾ ಇದೆ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದ್ರು.

ಇನ್ನು ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ಕಾಲೇಜಿಗೆ ಸೇರಿ ಎರಡು ತಿಂಗಳು ಆಗಿದೆ, ಈವರೆಗೂ ತರೆಗತಿಗಳು ಶುರುವಾಗಿಲ್ಲ. ಇನ್ನು ಒಂದೂವರೆ ಎರಡು ತಿಂಗಳಲ್ಲಿ ಎಕ್ಸಾಂ ಇದ್ದು ನಾವು ಹೇಗೆ ಬರೆಯಬೇಕು ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಂತೆ ಆಗ್ರಹಿಸಿದ್ರು.
ಇನ್ನು ಪ್ರತಿಭಟನಕಾರರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ್ದು, ವಾಹನ ಸಂಚಾರಕ್ಕೆ ಅಡಚಣೆ ಮಾಡಿದ್ರು. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನೆ ಕೈಬಿಡುವಂತೆ ತಿಳಿಸಿದ್ರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.




