Tumakuru : ಕಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ – ಬೈಕ್ ಸವಾರನಿಗೆ ಗಂಭೀರ ಗಾಯ.

ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ Tumakuru ನಗರದ ಕೋಡಿ ಬಸವಣ್ಣ ದೇವಸ್ಥಾನದ ಬಳಿ ನಡೆದಿದೆ.

READ THIS : ದೇವಸ್ಥಾನಕ್ಕೆ ಹರಕೆ ತೀರಿಸಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಭೀಮಾ ನದಿಯಲ್ಲಿ ಮುಳುಗಿ ಸಾವು!
ಕಾರಿಗೆ ಬೈಕ್ ಡಿಕ್ಕಿ
ಜಿಲ್ಲಾಧಿಕಾರಿ ಕಚೇರಿ ಕಡೆಗೆ ಯುವಕ ಬೈಕಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರನಿಗೆ ಕೈ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ
ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಪೊಲೀಸರು ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
MUST WATCH : ಇಂದು RCB VS CSK ಹೈವೋಲ್ಟೇಜ್ ಫೈಟ್ ಸ್ಟೇಡಿಯಂ ಸುತ್ತ ಪೊಲೀಸರಿಂದ ಬಿಗಿ ಭದ್ರತೆ




