
ಕೋಳಿ ಅಂಗಡಿ ಮುಂಭಾಗದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ನೋಡ ನೋಡ್ತಿದ್ದಂತೆ ಬೈಕ್ ಹೊತ್ತಿ ಉರಿದು, ಸುಟ್ಟು ಭಸ್ಮವಾಗಿರುವ ಘಟನೆ ಗುಬ್ಬಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 73 ರ ಬಸ್ ನಿಲ್ದಾಣದ ಬಳಿ ನಡೆದಿದೆ.
ಇನ್ನು ಈ ಎಲೆಕ್ಟ್ರಿಕ್ ವಾಹನ ಪಟ್ಟಣದ ಹಾಲು ವ್ಯಾಪಾರಿ ಪ್ರಕಾಶ್ ಎಂಬುವರಿಗೆ ಸೇರಿದ್ದಾಗಿದ್ದು, ಬೆಂಕಿಯ ರಭಸಕ್ಕೆ ದ್ವಿಚಕ್ರ ವಾಹನ ಬಹುತೇಕ ಸುಟ್ಟು ಕರಕಲಾಗಿದೆ. ಅಲ್ಲಿಯೇ ಇದ್ದ ಸ್ಥಳೀಯರು ತಕ್ಷಣ ಬೆಂಕಿ ನಂದಿಸಲು ಯತ್ನಿಸಿದ್ರೂ, ಆದರೆ ಅದಾಗಲೇ ದ್ವಿಚಕ್ರ ವಾಹನ ಬೆಂಕಿಗೆ ಆಹುತಿಯಾಗಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ .




