Kalaburagi ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಕೊಲೆ ಮಾಡಿ ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಡೆದಿದೆ.

Kalaburagi ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಭೀಕರ ಕ್ರೈಂ ಘಟನೆ ನಡೆದಿದೆ. ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು, ನಂತರ ಶವದ ಮೇಲೆ ಪೆಟ್ರೋಲ್ ಹಾಕಿ ಸುಟ್ಟುಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಭೀತಿ ಮತ್ತು ಆಕ್ರೋಶವನ್ನುಂಟು ಮಾಡಿದೆ.
ಮೃತ ಶಿಕ್ಷಕಿಯ ವಿವರ
ಕೊಲೆಯಾದ ಶಿಕ್ಷಕಿಯನ್ನು ಜ್ಯೋತಿ ಕಪಾಳೆ ಹಿರೇಮಠ (57) ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ ಗ್ರಾಮದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಸಾಮಾನ್ಯವಾಗಿ, ಜ್ಯೋತಿ ಅವರು ಬೀದರ್ನಲ್ಲಿ ಮನೆ ಮಾಡಿಕೊಂಡು ಶಾಲೆಗೆ ಹೋಗಿಬರುತ್ತಿದ್ದು, ವಾರಕ್ಕೊಮ್ಮೆ ಕಲಬುರಗಿಗೆ ಭೇಟಿ ನೀಡಿ ಮತ್ತೆ ವಾಪಸ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
MUST READ : Haveri : ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು..!!

ಮಾರ್ಗ ಮಧ್ಯದಲ್ಲಿ ಹತ್ಯೆ – ಪೆಟ್ರೋಲ್ ಹಾಕಿ ಶವ ಸುಟ್ಟುಹಾಕಿದ ದುಷ್ಕರ್ಮಿಗಳು
ಇದೀಗ ಲಭ್ಯವಾದ ಮಾಹಿತಿಯ ಪ್ರಕಾರ, ಕಲಬುರಗಿಯಿಂದ ಬೀದರ್ಗೆ ತೆರಳುವಾಗ ಮಾರ್ಗ ಮಧ್ಯದಲ್ಲಿರುವ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ದುಷ್ಕರ್ಮಿಗಳು ಶಿಕ್ಷಕಿಯನ್ನು ಕೊಲೆಗೈದಿದ್ದಾರೆ. ನಂತರ ರಸ್ತೆ ಪಕ್ಕದಲ್ಲೇ ಸುಮಾರು ಐದು ಲೀಟರ್ ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿರುವುದು ಕಂಡುಬಂದಿದೆ.
ಆರಂಭದಲ್ಲಿ ಪೊಲೀಸರು ಅಪರಿಚಿತ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ತನಿಖೆ ವೇಳೆ ಮೃತ ಮಹಿಳೆ ಕಲಬುರಗಿ ನಿವಾಸಿಯಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ತನಿಖೆ ಮುಂದುವರಿಕೆ
ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದಲೇ ತಿಳಿಯಬೇಕಾಗಿದೆ.
MUST WATCH : DAVANAGERE BY ELECTION | ಜಮೀರ್ಗಾಗಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಮನೆಯಲ್ಲಿ ಭರ್ಜರಿ ಔತಣ ಕೂಟ |




