ಕರ್ತವ್ಯದಲ್ಲಿದ್ದ ಮಹಿಳಾ PSI ಮೇಲೆ ಹಲ್ಲೆಗೆ ಯತ್ನ – ಧಮ್ಕಿ ಹಾಕಿದರೂ ಅರೆಸ್ಟ್ ಆಗಿಲ್ಲ ಆರೋಪಿಗಳು.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆಯೇ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ರಾಜ್ಯದ ಪೊಲೀಸ್ ಸುವ್ಯವಸ್ಥೆಯ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳಿನ್ನು ಹುಟ್ಟು ಹಾಕಿದೆ.
ಆಗಿದ್ದೇನು..?
ಚಿಂತಾಮಣಿ ಗ್ರಾಮಾಂತರ ಠಾಣೆಯ PSI ನಾಗಮ್ಮ ಹಾಗೂ ಜೀಪ್ ಚಾಲಕ ವೇಣುಗೋಪಾಲ್ ಅವರು ಏಪ್ರಿಲ್ 3ರಂದು ತಡರಾತ್ರಿ ಸುಮಾರು 12.40ರ ವೇಳೆಯಲ್ಲಿ ಗಸ್ತಿನಲ್ಲಿದ್ದಾಗ, ನಿಯಮ ಉಲ್ಲಂಘಿಸಿ ತೆರೆದಿದ್ದ ಹೋಟೆಲ್ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕೆಲವರು ಕ್ಯಾತೆ ತೆಗೆದು, ಪಿಎಸ್ಐ ನಾಗಮ್ಮ ಅವರ ಮೇಲೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಘಟನೆಗೆ ಸಂಬಂಧಿಸಿದಂತೆ ನಾಗೇಂದ್ರ, ನವೀನ್, ಪುನೀತ್ ಮತ್ತು ನರೇಂದ್ರ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅದ್ರೆ ಘಟನೆ ನಡೆದು ಮೂರು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ ಎಂಬುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

READ THIS : ಇರಾನ್ ಸರ್ವನಾಶಕ್ಕೆ ಹೊಸ ಡೆಡ್ಲೈನ್ ಕೊಟ್ಟ ಟ್ರಂಪ್!
ಪ್ರಕರಣವನ್ನು ಮುಚ್ಚಿಹಾಕಲು ಯತ್ನ?
ಇನ್ನು ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆಯೇ ದಾಳಿಗೆ ಯತ್ನ ನಡೆದಿದ್ರೂ ಕೂಡ ಪ್ರಕರಣವನ್ನು ಮುಚ್ಚಿಹಾಕಲು ಯತ್ನವಾಗಿದೆಯೇ ಎಂಬ ಅನುಮಾನವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಅಲ್ದೇ ಹಲ್ಲೆಗೆ ಸಂಬಂಧಿಸಿದ ವಿಡಿಯೋ ದೃಶ್ಯಗಳು ಲಭ್ಯವಾಗಿದ್ದು, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ
ಇನ್ನು ರಾಜಕೀಯ ಒತ್ತಡಕ್ಕೆ ಪೊಲೀಸ್ ಅಧಿಕಾರಿಗಳು ಮಣಿದರಾ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ ಭುಗಿಲೆದ್ದಿದೆ.
ಒಟ್ನಲ್ಲಿ ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆಯೇ ದಾಳಿಗೆ ಯತ್ನ ನಡೆದಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಆತಂಕ ಹುಟ್ಟಿಸಿದ್ದು, ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
MUST WATCH : ಶಿರಾದ ಬಳಿ ಬಸ್ಗಳ ನಡುವೆ ಅಪ*ತ ಗಾಯಾಳುಗಳ ಬಗ್ಗೆ DS ಏನಂದ್ರು ?

