Karnataka : ರಾಜ್ಯಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಮೂಡಿಸಿರುವ ವಿಚಾರ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ರಾಜ್ಯಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಮೂಡಿಸಿರುವ ವಿಚಾರ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಹೊಸ ಯೋಜನೆಯಾದ ಕೆಪಿಎಸ್ ಮ್ಯಾಗ್ನೆಟ್ ಸ್ಕೀಮ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳು ಮುಚ್ಚುವ ಆತಂಕ ಎದುರಾಗಿದೆ.
ಮ್ಯಾಗ್ನೆಟ್ ಸ್ಕೀಮ್ ವಿರುದ್ಧ ರಾಜ್ಯಾದ್ಯಂತ ವಿರೋಧ
ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮ್ಯಾಗ್ನೆಟ್ ಸ್ಕೀಮ್ ವಿರುದ್ಧ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳಬಹುದು ಎಂಬ ಆತಂಕ ಪೋಷಕರು ಹಾಗೂ ಶಿಕ್ಷಕರಲ್ಲಿ ಹೆಚ್ಚಾಗಿದೆ. ಇನ್ನು ಈ ಯೋಜನೆಯಡಿ ಹಲವಾರು ಸಣ್ಣಶಾಲೆಗಳನ್ನ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಇದ್ರಿಂದ ಬಡ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ.
READ THIS : Chikkamagaluru : ಸ್ನೇಹಿತನ ಮದುವೆ ಹೋಗಿದ್ದ ಟೆಕ್ಕಿ ನೀರುಪಾಲು

ಶಿಕ್ಷಣದಿಂದ ದೂರವಾಗುವ ಅಪಾಯ
ಈ ಯೋಜನೆಯಡಿ ಗ್ರಾಮೀಣ ಭಾಗಗಳ ಸಣ್ಣ ಶಾಲೆಗಳನ್ನ ವಿಲೀನಗೊಳಿಸಿ, ದೊಡ್ಡ ಕೇಂದ್ರ ಶಾಲೆಗಳಾಗಿ ರೂಪಿಸುವ ಉದ್ದೇಶವಿದೆ. ಆದ್ರೆ, ಇದ್ರಿಂದ ಬಡ ಮತ್ತು ಗ್ರಾಮೀಣ ಮಕ್ಕಳಿಗೆ ಶಿಕ್ಷಣದಿಂದ ದೂರವಾಗುವ ಅಪಾಯ ಇದೆ ಎಂದು ಪೋಷಕರು ಹಾಗೂ ಸಂಘಟನೆಗಳು ಎಚ್ಚರಿಕೆ ನೀಡಿವೆ, ಈ ಯೋಜನೆ ವಿರುದ್ಧ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಪ್ರತಿಭಟಮೆಗಳನ್ನ ಮಾಡ್ತಿದ್ದು, ಇದೀಗ ಏಪ್ರಿಲ್ 10 ರಂದು ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರು, ಶಿಕ್ಷಕರು ಒಂಧಾಗಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣ – Karnataka
ಒಟ್ಟಾರೆ ಮ್ಯಾಗ್ನೆಟ್ ಸ್ಕೀಮ್ ಕಾರಣದಿಂದ ಸರ್ಕಾರಿ ಶಾಲೆಗಳ ವಿಲೀನ ಇದೀಗ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಇದರಿಂದ ಹೊಡೆತ ಬೀಳುವ ಭೀತಿ ಒಂದೆಡೆ ವ್ಯಕ್ತವಾಗುತ್ತಿದ್ರೆ, ಮತ್ತೊಂದೆಡೆ ಇದ್ರಿಂದ ಶಿಕ್ಷಣ ಗುಣಮಟ್ಟ ಹೆಚ್ಚಲಿದೆ ಎಂದು ಸರ್ಕಾರ ಹೇಳುತ್ತಿದೆ.

MUST WATCH : ಚಿನ್ನಸ್ವಾಮಿಯಲ್ಲಿ ಹೈವೋಲ್ಟೇಜ್ ಫೈಟ್ ಸಿಎಸ್ಕೆ ವಿರುದ್ಧ ಆರ್ಸಿಬಿ ಭರ್ಜರಿ ಗೆಲುವು




