Karnataka Weather : ಬಿಸಿಲಿನ ಝಳಕ್ಕೆ ಕಂಗೆಟ್ಟಿರುವ ಜನತೆಗೆ ಹವಾಮಾನ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ.

Karnataka Weather : ರಾಜ್ಯದಾದ್ಯಂತ ಕಳೆದ ಕೆಲವು ವಾರಗಳಿಂದ ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.
ಏಪ್ರಿಲ್ 7ರಿಂದ 9ರವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ರೈತರ ಮೊಗದಲ್ಲಿ ಮಂದಹಾಸ
ಬೇಸಿಗೆಯ ಉರಿಬಿಸಿಲಿನಿಂದ ಬಳಲುತ್ತಿರುವ ಜನರು ಮಳೆಯ ನಿರೀಕ್ಷೆಯಲ್ಲಿದ್ದು, ಈ ಮುಂಗಾರುಪೂರ್ವ ಮಳೆಯ ಸುದ್ದಿ ಜನಸಾಮಾನ್ಯರು ಹಾಗೂ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಸಾಧಾರಣ ಮಳೆಯಾಗುವ ಜಿಲ್ಲೆಗಳು
ಹವಾಮಾನ ಇಲಾಖೆಯ ವರದಿ ಪ್ರಕಾರ, ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆಗಳು ಹೆಚ್ಚಾಗಲಿವೆ. ಮಲೆನಾಡು ಭಾಗದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದೇ ರೀತಿ ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

READ THIS : ರಾಜ್ಯದಲ್ಲಿ 40 ಸಾವಿರ ಸರ್ಕಾರಿ ಶಾಲೆಗಳು ಮುಚ್ಚುವ ಭೀತಿ!
ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ
ರಾಜಧಾನಿ ಬೆಂಗಳೂರಿನಲ್ಲಿಯೂ ಏಪ್ರಿಲ್ 7ರಿಂದ 9ರವರೆಗೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.
ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಇದರಿಂದ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಲಿದೆ.
ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಎಚ್ಚರಿಕೆ
ಇದು ಮುಂಗಾರುಪೂರ್ವ ಮಳೆಯಾಗಿರುವುದರಿಂದ ಮಳೆಯ ಜೊತೆಗೆ ಬಿರುಗಾಳಿ ಹಾಗೂ ಸಿಡಿಲಿನ ಆರ್ಭಟ ಹೆಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ಇರಲಿದ್ದು, ಗುಡುಗು-ಮಿಂಚು ಬರುವಾಗ ಮರಗಳ ಕೆಳಗೆ ನಿಲ್ಲದಂತೆ ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

MUST WATCH : 38 ನೇ ದಿನವೂ ಮುಂದುವರೆದ ಯುದ್ಧ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ಸುರಿಮಳೆ




