Bengaluru : ಪಂಚಮಸಾಲಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ.

ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳ ಮೇಲೆ ಲೈಂಗಿಕ ದೌರ್ಜನ್ಯಗಳಂತಹ ಆರೋಪಗಳು ಹೆಚ್ಚಾಗುತ್ತಿವೆ. ಮುರುಘಾ ಶ್ರೀಗಳ ವಿರುದ್ಧ ದಾಖಲಾದ ಫೋಕ್ಸೋ ಪ್ರಕರಣದ ಬಳಿಕ ನಾನಾ ಸ್ವಾಮೀಜಿಗಳ ವಿರುದ್ಧ ಆರೋಪಗಳು ಕೇಳಿ ಬಂದಿವೆ. ಇದೀಗ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಮಾಜಿ ಪೀಠಾಧ್ಯಕ್ಷರಾದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ನ್ಯಾಯಕ್ಕಾಗಿ ಪೊಲೀಸರಿಗೆ ದೂರು ನೀಡಿದ ಸಂತ್ರಸ್ತ ಮಹಿಳೆ
ಬೆಂಗಳೂರಿನ ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆಯೊಬ್ಬರಿಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಗಂಭೀರ ಆರೋಪಗಳನ್ನು ಹೊರಿಸಿ ದೂರು ನೀಡಿದ್ದಾರೆ. ಸ್ವಾಮಿಜಿ ತನ್ನ ಮೇಲೆ ದೈಹಿಕ ಹಾಗೂ ಮಾನಸಿಕವಾಗಿ ಲೈಂಗಿಕ ಶೋಷಣೆ ಎಸಗಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ. ತಾನು ಮಹಾಪೀಠ ಕೂಡಲ ಸಂಗಮದ ಪೀಠಾಧಿಪತಿಯಾಗಿರುವ ಸ್ವಾಮೀಜಿಯವರ ಭಕ್ತೆಯಾಗಿದ್ದು, ಬೆಂಗಳೂರಿಗೆ ಬಂದ ಸಂದರ್ಭಗಳಲ್ಲಿ ಹಲವಾರು ಬಾರಿ ಭೇಟಿಯಾಗಿ ಅವರ ಹೋರಾಟಗಳಿಗೆ ಬೆಂಬಲ ಸೂಚಿಸಿದ್ರಂತೆ.

READ THIS : ಯುದ್ಧದ ಟೆನ್ಷನ್ ಮಧ್ಯೆ ಇರಾನ್ಗೆ ದೊಡ್ಡ ಆಘಾತ!
ಪ್ರಸಾದ ನೀಡುತ್ತೇನೆಂದು ವಿಶ್ವಾಸ ಗಳಿಸಿದ್ರಂತೆ ಸ್ವಾಮೀಜಿ
ಇನ್ನು ಸ್ವಾಮೀಜಿಯ ಪರಿಚಯದ ನಂತರ ಸ್ವಾಮೀಜಿಯವರು ಮಠಕ್ಕೆ ಬರಲು ಆಹ್ವಾನ ನೀಡಿದರು. ಸ್ವಾಮೀಜಿ “ಪ್ರಸಾದ ಕೊಡುತ್ತೇನೆ” ಎಂದು ಹೇಳಿ ವಿಶ್ವಾಸ ಗಳಿಸಿಕೊಂಡ ಬಳಿಕ, ಅಸಭ್ಯವಾಗಿ ಮಾತನಾಡುತ್ತಾ ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದಾರೆ. ಇದನ್ನು ದುರುಪಯೋಗ ಮಾಡಿಕೊಂಡ ಸ್ವಾಮೀಜಿ ನನ್ನೊಂದಿಗೆ ಮಾತನಾಡುತ್ತಾ ಅಸಭ್ಯವಾದ ಪದಗಳನ್ನು ಬಳಸಿ, ಮೈ ಕೈಯನ್ನು ಮುಟ್ಟುತ್ತ ನನ್ನೊಂದಿಗೆ ದೈಹಿಕವಾಗಿ ತಪ್ಪಾ ವರ್ತಿಸಿದ್ದಾರೆ. ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ನನ್ನ ಮೇಲೆ ಅವರು ನಡೆಸಿರುವ ಲೈಂಗಿಕ ದೌರ್ಜನ್ಯದ ಖಾಸ ವಿಡಿಯೋವನ್ನು ಮಾಡಿಕೊಂಡಿದ್ದು, ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, ಪ್ರತಿ ರಾತಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡುತ್ತಿದ್ದರು.
ಸಿಎಂ, ಗೃಹ ಸಚಿವ, ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು
ಇದಕ್ಕೆ ಸಹಕರಿಸದಿದ್ದರೆ ನಿನ್ನ ವಿಡಿಯೋವನ್ನು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮಾಡುವುದಾಗಿ ಸ್ವಾಮೀಜಿ ಬೆದರಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದರಿಂದ ತಾನು ಭಯ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ ಎಂದು ತಿಳಿಸಿದ್ದಾರೆ. ಸಂತ್ರಸ್ತೆ ತ್ಯಾಗರಾಜನಗರ ಪೊಲೀಸ್ ಠಾಣೆಗೆ ಹಾಗೂ ಮುಖ್ಯಮಂತ್ರಿ, ಗೃಹ ಸಚಿವ, ಮಹಿಳಾ ಆಯೋಗ ಹಾಗೂ ಮಾನವ ಹಕ್ಕು ಆಯೋಗಗಳಿಗೆ ದೂರು ದಾಖಲಿಸಿದ್ದಾರೆ.

ಸ್ವಾಮೀಜಿಗೆ ಸಂಕಷ್ಟ!
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಹೋರಾಟ ನಡೆಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಸ್ವಾಮೀಜಿ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸುಳ್ಳಾ..? ಅಥವಾ ನಿಜಾನಾ ಅಂತಾ ತನಿಖೆ ಬಳಿಕ ತಿಳಿದುಬರಲಿದೆ.
MUST WATCH : ವಿವಿ ಆಡಳಿತ ಮಂಡಳಿ- ಸಿಂಡಿಕೇಟ್ ನಡುವೆ ಗುದ್ದಾಟ – ಏ. 9ರಿಂದ ತರಗತಿ ಬಹಿಷ್ಕರಿಸಿ ಉಪನ್ಯಾಸಕರ ಹೋರಾಟ





