
HEAVY RAIN IN BIDAR DISTRICT: ಗಡಿ ಜಿಲ್ಲೆ ಬೀದರ್ನಲ್ಲಿ ಧಾರಾಕಾರ ಮಳೆ (Heavy Rain ) ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹುಲಸೂರು, ಬೀದರ್ ಹಾಗೂ ಭಾಲ್ಕಿ ತಾಲೂಕುಗಳಲ್ಲಿ ಮಳೆಯ ಪ್ರಭಾವದಿಂದ ಹಲವಾರು ಸ್ಥಳಗಳಲ್ಲಿ ಪ್ರವಾಹ ಪರಿಸ್ಥಿತಿ (Flood Situation) ಉಂಟಾಗಿದೆ.
ಹೌದು..ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿದು, ರಸ್ತೆಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಇದ್ರ ಪರಿಣಾಮವಾಗಿ ಹುಲಸೂರು-ಭಾಲ್ಕಿ ಮಾರ್ಗದಲ್ಲಿನ ವಾಹನ ಸಂಚಾರ ಸ್ಥಗಿತಗೊಂಡಿದೆ. ಅಲ್ದೇ ಬೀದರ್ ತಾಲೂಕಿನ ಚಿಲ್ಲರ್ಗಿ ಸೇತುವೆ ಮೇಲೆ ನೀರು ಹರಿದ ಕಾರಣ, ಚಿಲ್ಲರ್ಗಿ–ಚಿಮ್ಮಕೋಡ್–ಗಾದಗಿ ಮಾರ್ಗದ ಸಂಚಾರಕ್ಕೂ ಬ್ರೇಕ್ ಬಿದ್ದಿದೆ. ಇದರಿಂದ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಮಾಂಜ್ರಾ ನದಿಗೆ ಲಕ್ಷ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ದೇ ನದಿದಂಡೆಯಲ್ಲಿರುವ ಲಕ್ಷಾಂತರ ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ. ಈ ಪ್ರವಾಹ ಪರಿಸ್ಥಿತಿಯಿಂದಾಗಿ ಜಿಲ್ಲೆಯ ಜನಜೀವನ ಮೂರಾಬಟ್ಟೆಯಾಗಿದ್ದು, ಸದ್ಯ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.




