Mysore ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ನಲ್ಲಿ ನಿಲ್ಲಿಸಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ…

Mysore ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಿಗ್ನಲ್ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ದುರ್ಘಟನೆ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ನಡೆದಿರುವುದು ಆತಂಕ ಮೂಡಿಸಿದೆ.

ಮುಂಜಾನೆ ಸಂಭವಿಸಿದ ಭೀಕರ ಅಪಘಾತ
ಇಂದು ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಫ್ಲೈಓವರ್ ಇಳಿಯುತ್ತಿದ್ದಂತೆ ಹಿಂಬದಿ ಲಾರಿ ನಿಯಂತ್ರಣ ತಪ್ಪಿ, ಮಾರ್ಗದಲ್ಲಿದ್ದ ವಾಹನಗಳಿಗೆ ಟಚ್ ಮಾಡಿಕೊಂಡು ಬಂದಿರುವುದಾಗಿ ತಿಳಿದುಬಂದಿದೆ.
MUST READ : Dina Bhavishya : ದಿನ ಭವಿಷ್ಯ 8 ಏಪ್ರಿಲ್ 2026..
ಆ ನಂತರ, ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಅತೀ ಹೆಚ್ಚು ಇದ್ದುದರಿಂದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಚಾಲಕನನ್ನು ವಿಜಯ್ ಕುಮಾರ್ (60) ಎಂದು ಗುರುತಿಸಲಾಗಿದೆ. ಅವರು ಚಾಲನೆ ಮಾಡುತ್ತಿದ್ದ ಲಾರಿ ಸ್ವಿಗ್ಗಿ ಇನ್ಸ್ಟಾಮಾರ್ಟ್ಗೆ ತರಕಾರಿ ಪೂರೈಕೆ ಮಾಡುತ್ತಿದ್ದ ವಾಹನವಾಗಿದ್ದು, ಕೋಲಾರದ ಮಾಲೂರಿನಿಂದ ಆರ್ಆರ್ ನಗರಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಪೊಲೀಸರು ಕೈಗೊಂಡ ಕ್ರಮ
ಅಪಘಾತದ ನಂತರ ತಕ್ಷಣ ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಅಪಘಾತಕ್ಕೊಳಗಾದ ವಾಹನವನ್ನು ತೆರವುಗೊಳಿಸಿದ್ದಾರೆ. ಬಳಿಕ ಮೃತದೇಹವನ್ನು ಕೆಆರ್ ಮಾರುಕಟ್ಟೆಯ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇದಲ್ಲದೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆಯನ್ನು ಆರಂಭಿಸಿದ್ದಾರೆ.
MUST WATCH : ಸರ್ಕಾರ ಕೆಲಸ ಕೊಡಿಸುವುದಾಗಿ ವಂಚನೆ – ಬರೋಬ್ಬರಿ 50 ಲಕ್ಷ ಹಣ ಪಡೆದು ಮೋಸ..! | BENGALURU NEWS |

