
ಇಂದು ಬೆಳಗಿನ 4 ಗಂಟೆ ಸುಮಾರಿಗೆ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಚಾಲಕರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಇಂಡಸ್ ಕಟ್ಟೆ ಗೇಟ್ ಬಳಿ ನಡೆದಿದೆ.
ಮೃತರನ್ನು ಹುಬ್ಬಳ್ಳಿ ಮೂಲದ ಚಾಲಕ ಹುಲಿಗಪ್ಪ ಹಾಗೂ ಮಡಕಶಿರಾ ಮೂಲದ ಚಾಲಕ ಬುಜ್ಜಿಬಾಬು ಎಂದು ಗುರುತಿಸಲಾಗಿದೆ. ಇನ್ನು ನಿದ್ರೆಯ ಮಂಪರಿನಲ್ಲಿ ಚಾಲಕರ ನಿಯಂತ್ರಣ ತಪ್ಪಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಭೇಡಿ ನೀಡಿ , ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.




