
KODAGAU ROAD ACCIDENT : ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮಡಿಕೇರಿ ದಸರಾ ಕರ್ತವ್ಯಕ್ಕೆ ತೆರಳುತ್ತಿದ್ದ 7 ಮಂದಿ ಹೋಂ ಗಾರ್ಡ್ಗಳೂ ಸೇರಿದ್ದಾರೆ .
ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ KSRTC ಬಸ್ಗೆ, ಗುಡ್ಡೆಹೊಸೂರು ಕಡೆಯಿಂದ ಬರುತ್ತಿದ್ದ JCB ಯ ಬಾಂಡಲಿ (ಮುಂದಿನ ದೊಡ್ಡ ಬಕೆಟ್) ವೇಗವಾಗಿ ಬರುತ್ತಿದ್ದ ಬಸ್ಸಿಗೆ ಬಲವಾಗಿ ತಗುಲಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗದ ಗಾಜುಗಳು ಚೂರಾಗಿದ್ದು, ಕೆಲವು ಭಾಗಗಳು ತೀವ್ರವಾಗಿ ಹಾನಿಗೀಡಾಗಿವೆ.
ಇನ್ನು ಈ ಅಪಘಾತದಿಂದಾಗಿ ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂ ಡಿದ್ದಾರೆ. ಸ್ಥಳೀಯರು ಹಾಗೂ ಸಮೀಪದಲ್ಲಿದ್ದ ವಾಹನ ಚಾಲಕರು ತಕ್ಷಣವೇ ಅಪಘಾತ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅದೃಷ್ಟವಶಾತ್, ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ಎಲ್ಲರಿಗೂ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇನ್ನು ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




