ದ್ವಿತೀಯ PUC ಪರೀಕ್ಷೆ ಫಲಿತಾಂಶ ಇದೀಗ ಪ್ರಕಟವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇದೀಗ ಪ್ರಕಟವಾಗಿದ್ದು, ದಾಖಲೆ ಮಟ್ಟದಲ್ಲಿ ಪಿಯುಸಿ ಫಲಿತಾಂಶ ಏರಿಕೆ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ವರ್ಷ ಶೇ. 86 ರಷ್ಟು ಫಲಿತಾಂಶದ ದಾಖಲಾಗಿದ್ದು, ಕಳೆದ ವರ್ಷ 73.45 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ವರ್ಷ ಶೇಕಡ 12.55ಕ್ಕಿಂತ ಹೆಚ್ಚು ಫಲಿತಾಂಶ ದಾಖಲು ಆಗಿದೆ.
6.10 ಲಕ್ಷ ಮಂದಿ ಪಾಸ್
ಈ ಬಾರಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ ಸುಮಾರು ಶೇ.86ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇವರಲ್ಲಿ ಸುಮಾರು 6.10 ಲಕ್ಷ ಮಂದಿ ಪಾಸ್ ಆಗಿದ್ದಾರೆ.

ಪರೀಕ್ಷಾ ವಿವರಗಳು
ದ್ವಿತೀಯ PUC ಪರೀಕ್ಷೆ ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದ 1217 ಕೇಂದ್ರಗಳಲ್ಲಿ ನಡೆd. ಒಟ್ಟು 5174 ಕಾಲೇಜುಗಳ ಸುಮಾರು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು.
- ಸೈನ್ಸ್ ವಿಭಾಗ: 2.92 ಲಕ್ಷ ವಿದ್ಯಾರ್ಥಿಗಳು
- ವಾಣಿಜ್ಯ ವಿಭಾಗ: 2.11 ಲಕ್ಷ ವಿದ್ಯಾರ್ಥಿಗಳು
- ಕಲಾ ವಿಭಾಗ: 1.42 ಲಕ್ಷ ವಿದ್ಯಾರ್ಥಿಗಳು
READ THIS : ಚಾರಣಕ್ಕೆ ತೆರಳುವವರೇ ಗಮನಿಸಿ – ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಫಲಿತಾಂಶ ಪಡೆಯುವುದು ಹೇಗೆ?
ಸಾಮಾನ್ಯವಾಗಿ ಫಲಿತಾಂಶ ಪ್ರಕಟವಾದ ತಕ್ಷಣ ಲಕ್ಷಾಂತರ ವಿದ್ಯಾರ್ಥಿಗಳು ಒಮ್ಮೆಗೆ ಅಧಿಕೃತ ವೆಬ್ಸೈಟ್ಗಳ ಮೇಲೆ ಮುಗಿಬೀಳುತ್ತಾರೆ. ಇದರಿಂದ ಸರ್ವರ್ ಸಮಸ್ಯೆ ಅಥವಾ ಪೇಜ್ ಲೋಡ್ ಆಗಲು ಬಹಳ ಸಮಯ ತೆಗೆದುಕೊಳ್ಳುವುದು ಮಾಮೂಲಿ. ಆದರೆ ಈ ಬಾರಿ ನೀವು ವೆಬ್ಸೈಟ್ ಓಪನ್ ಆಗುವವರೆಗೆ ಕಾಯಬೇಕಾದ ಅಗತ್ಯವಿಲ್ಲ.
ವೇಗವಾಗಿ & ಸುಲಭವಾಗಿ ನಿಮ್ಮ ಅಂಕಪಟ್ಟಿ ಪಡೆಯಲು ಈ ವೆಬ್ಸೈಟ್ಗೆ ಭೇಟಿ ನೀಡಿ
ಡಿಜಿಲಾಕರ್ ಮೂಲಕವೇ ನೇರವಾಗಿ ಅಂಕಪಟ್ಟಿ ಡೌನ್ ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶ ಪಡೆಯಬಹುದು. ವೆಬ್ಸೈಟ್ಗಿಂತಲೂ ವೇಗವಾಗಿ ಮತ್ತು ಸುಲಭವಾಗಿ ನಿಮ್ಮ ಅಂಕಪಟ್ಟಿ ಪಡೆಯಲು ನಿಮ್ಮ ಮೊಬೈಲ್ ನಲ್ಲಿ ‘DigiLocker’ ಡೌನ್ಲೋಡ್ ಮಾಡಿ. ಅಪ್ಲಿಕೇಶನ್ ಇಲ್ಲದಿದ್ದರೆ ನೇರವಾಗಿ digilocker.gov.in ವೆಬ್ಸೈಟ್ಗೂ ಭೇಟಿ ನೀಡಬಹುದು.
MUST WATCH : ಇಂದು LUCKNOW, KOLKATA ಮುಖಾಮುಖಿ – LSG ವಿರುದ್ಧ ಗೆದ್ದು ಬೀಗುತ್ತಾ KKR ?
ರಾಜ್ಯಕ್ಕೆ ಪ್ರಥಮ
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.





