ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 10 ರಿಂದ 12ರವರೆಗೆ ಬಿಸಿಗಾಳಿ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ Yellow Alert ಜಾರಿ ಮಾಡಿದೆ.

ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (IMD) ಮಹತ್ವದ ಎಚ್ಚರಿಕೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ Yellow Alert ಜಾರಿ ಮಾಡಲಾಗಿದೆ.
ಅದೇ ಸಮಯದಲ್ಲಿ, ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
MUST READ : PUC ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು!

ಯಾವ ಜಿಲ್ಲೆಗಳಿಗೆ ಎಚ್ಚರಿಕೆ?
ಉತ್ತರ ಕನ್ನಡ (Uttara Kannada), ಉಡುಪಿ (Udupi) ಮತ್ತು ದಕ್ಷಿಣ ಕನ್ನಡ (Dakshina Kannada) ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಏಪ್ರಿಲ್ 10 ರಿಂದ 12ರವರೆಗೆ ಬಿಸಿಗಾಳಿ (Heatwave) ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದರಿಂದಾಗಿ, ಈ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿದೆ.

ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಳ
ಇದಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ದಗೊಂಡಿದೆ.ಪ್ರಸ್ತುತ, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದು ವರದಿಯಾಗಿದೆ.
ಈ ಪರಿಸ್ಥಿತಿಯಿಂದ ಸಮುದ್ರದಲ್ಲಿ ಅಲೆಗಳ ಪ್ರಮಾಣ ಹೆಚ್ಚಾಗಿದ್ದು, ಮೀನುಗಾರರಿಗೆ ಅಪಾಯ ಸಂಭವಿಸುವ ಸಾಧ್ಯತೆ ಇದೆ.

ಅಧಿಕ ಗಾಳಿ ಒತ್ತಡ ಮತ್ತು ಸಮುದ್ರದ ಅಲೆಗಳ ಕಾರಣದಿಂದಾಗಿ ಕಾರವಾರ ಸೇರಿದಂತೆ ಕರಾವಳಿ ಭಾಗದ ಮೀನುಗಾರರು ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ್ದಾರೆ.
ಅದೇ ರೀತಿ, ಆಳ ಸಮುದ್ರಕ್ಕೆ ತೆರಳುವ ಪರ್ಶಿಯನ್ ಬೋಟುಗಳು ಸಹ ಸುರಕ್ಷತಾ ಕ್ರಮವಾಗಿ ಬಂದರಿನಲ್ಲಿ ಲಂಗರು ಹಾಕಿರುವುದು ತಿಳಿದುಬಂದಿದೆ.
MUST WATCH : PUC RESULT | ಪಿಯುಸಿ ಫಲಿತಾಂಶ ಪ್ರಕಟಿಸಿದ ಇಲಾಖೆ ತುಮಕೂರಿಗೆ ಎಷ್ಟನೇ ಸ್ಥಾನ ಗೊತ್ತಾ | TUMAKURU




