Shivamogga : “ಹುಲಿಕಲ್ ಘಾಟ್ನಲ್ಲಿ” ಗುಡ್ಡ ಕುಸಿತ: ಮೂವರು ಕಾರ್ಮಿಕರ ದುರ್ಮರಣ!

Shivamogga ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಭಾರೀ ದುರಂತ ಸಂಭವಿಸಿದೆ. ಗುಡ್ಡ ಕುಸಿತದಿಂದ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಗುಡ್ಡ ಕುಸಿದು ಅವಘಡ
ಮೃತರನ್ನು ರಾಘವೇಂದ್ರ (37), ರಾಜು (30) ಮತ್ತು ಶಬ್ಬೀರ್ (40) ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬರು ಹೊರ ರಾಜ್ಯದ ಕಾರ್ಮಿಕರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರ–ಶಿವಮೊಗ್ಗ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಈ ಅವಘಡ ಸಂಭವಿಸಿದೆ.
ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯ
ಘಟನೆಯಲ್ಲಿ ಸುಮಂತ ಮತ್ತು ಪರಮೇಶ್ ಸೇರಿದಂತೆ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣ ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
READ THIS : BIKE THEFT : ಮನೆಮುಂದೆ ನಿಲ್ಲಿಸಿದ್ದ ಬೈಕ್ ಕದ್ದು ಖದೀಮ ಎಸ್ಕೇಪ್

ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದುಕೊಳ್ಳುವ ಕಾರ್ಯಾಚರಣೆ
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದುಕೊಳ್ಳುವ ಕಾರ್ಯಾಚರಣೆ ಮುಂದುವರಿದಿದ್ದು, ರಾತ್ರಿ ಸಮಯದ ಕಾರಣದಿಂದ ಕಾರ್ಯದಲ್ಲಿ ಅಡಚಣೆಗಳು ಎದುರಾಗಿವೆ.
ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಇನ್ನು ಹೊಸನಗರ ತಹಶೀಲ್ದಾರ್ ಭರತ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
MUST WATCH : PUC RESULT ದಿನವೇ ಸ್ಟೂಡೆಂಟ್ ಸಾ* – ಸಾ*ನ ಸುತ್ತ ಹಲವು ಅನುಮಾನಗಳು?




