ಹುಲಿಕಲ್ ಘಾಟ್ನಲ್ಲಿ ರಸ್ತೆ ತಡೆಗೋಡೆ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ – CM

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೃತಪಟ್ಟ ಮೂವರು ಕಾರ್ಮಿಕಮರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಅವರು, ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿ, ಪರಿಹಾರ ಘೋಷಿಸಿದ್ದಾರೆ.
READ THIS : ಮುಂಬೈ ಇಂಡಿಯನ್ಸ್ನಲ್ಲಿ 15 ವರ್ಷ ಪೂರೈಸಿದ ರೋಹಿತ್
ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ತಲಾ 5 ಲಕ್ಷ ಪರಿಹಾರ ಘೋಷಿಸಿದ CM
ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು CM ತಿಳಿಸಿದ್ದಾರೆ.
MUST WATCH : ಪ್ರೀತಿಸಿ ಮದುವೆಗೆ ಒಪ್ಪದ ಯುವತಿ – ಪ್ರೀತಿಗಾಗಿ ಪ್ರಾಣ ಬಿಟ್ಟ ಯುವಕ..!





