ಧಾರವಾಡದಲ್ಲಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ Murder!

ಅವಳಿ ನಗರ ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ Murder
ನೆನ್ನೆ ರಾತ್ರಿ ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಫೈರೋಜ್ ಪಠಾಣ್ ಅವರ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ Murder ಮಾಡಿದ್ದಾರೆ ಎಂದು ತಿಳಿದುಬಂದಿದೆ.
6 ಮಂದಿ ಆರೋಪಿಗಳಿಂದ ಈ ಕೃತ್ಯ!
ಘಟನೆಯ ಮಾಹಿತಿ ತಿಳಿದ ತಕ್ಷಣ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು ಆರು ಮಂದಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

READ THIS : ಹುಲಿಕಲ್ ಘಾಟ್ ದುರಂತ – ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ CM
ಇಬ್ಬರು ಪೊಲೀಸರ ವಶಕ್ಕೆ
ಈ ಪ್ರಕರಣದಲ್ಲಿ ಮೊಹಮ್ಮದ್ ಶಾ, ಸದ್ದಾಂ, ಗೌಸ್ ಮತ್ತು ಪರ್ವೇಜ್ ಪ್ರಮುಖ ಆರೋಪಿಗಳೆಂದು ತಿಳಿದುಬಂದಿದೆ. ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಹಾಗೂ ಗುಲಾಬ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ನಾಲ್ವರು ಆರೋಪಿಗಳು ಎಸ್ಕೇಪ್ ಆಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Murder ಗೆ ಕಾರಣವೇನು..?
ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

MUST WATCH : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಜಟಾಪಟಿ – CMಗೆ PARAM ಏನಂತಾ ಆಗ್ರಹಿಸಿದ್ರು..!




