Tumakuru : PUC ಫಲಿತಾಂಶದಲ್ಲಿ ಶೇಷಾದ್ರಿಪುರಂ ಕಾಲೇಜಿಗೆ 9 ರ್ಯಾಂಕ್ – ಸ್ಟೂಡೆಂಟ್ಸ್ ಸಾಧನೆಗೆ ಆಡಳಿತ ಮಂಡಳಿ ಖುಷ್.

ತುಮಕೂರು ನಗರದಲ್ಲಿ ಪ್ರತಿಷ್ಠಿತ ಕಾಲೇಜುಗಳು ಇದ್ದು, ಎಲ್ಲಾ ಕಾಲೇಜುಗಳಿಗೂ ಕಾಂಪಿಟೇಷನ್ ಕೊಟ್ಟಿ ನಾವು ಕೂಡ ಯಾರಿಗೂ ಕಮ್ಮಿ ಇಲ್ಲ ಅಂತಾ ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿಗಳು PUC ಯಲ್ಲಿ ಉತ್ತಮ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

9 ವಿದ್ಯಾರ್ಥಿಗಳು ರಾಜ್ಯ ಮಟ್ಟದ ರ್ಯಾಂಕ್
ದ್ವಿತೀಯ ಪಿಯುಸಿ ಫಲಿತಾಂಶಗಳು ಪ್ರಕಟವಾಗಿದ್ದು, ತುಮಕೂರಿನ ಪ್ರತಿಷ್ಠಿತ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜು ಈ ಬಾರಿ ಅತ್ಯುತ್ತಮ ಸಾಧನೆ ಮಾಡಿದೆ. ಒಟ್ಟು 9 ಮಂದಿ ವಿದ್ಯಾರ್ಥಿಗಳು ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ರಾಜ್ಯ ಮಟ್ಟದಲ್ಲಿ ಗಮನಸೆಳೆಯುವಂತಹ ಅಂಕಗಳನ್ನು ಪಡೆದು ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ. ತುಮಕೂರು ನಗರದ ಗಂಗಸಂದ್ರ ರಸ್ತೆಯ ಕಲ್ಪತರು ಬಡಾವಣೆಯಲ್ಲಿರುವ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕಾಲೇಜಿನಲ್ಲಿ ಸಂತಸ ಮನೆ ಮಾಡಿತ್ತು. ಇನ್ನು ಈ ಬಾರಿ ಕಾಲೇಜಿನ ವಿದ್ಯಾರ್ಥಿಗಳು ಶ್ರೇಷ್ಠ ಸಾಧನೆ ತೋರಿದ್ದು, ಒಟ್ಟು 9 ವಿದ್ಯಾರ್ಥಿಗಳು ರಾಜ್ಯ ಮಟ್ಟದ ರ್ಯಾಂಕ್ ಗಳನ್ನು ಪಡೆದು ಕಾಲೇಜಿನ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

595 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ರ್ಯಾಂಕ್
ಇನ್ನು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮೋನಿಕ 595 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ರ್ಯಾಂಕ್ ಗಳಿಸಿ ಕಾಲೇಜಿನ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅದೇ ರೀತಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶೆರ್ಲಿ ಎಸ್ ಅವರು 589 ಅಂಕಗಳನ್ನು ಪಡೆದು ರಾಜ್ಯಕ್ಕೆ 11ನೇ ರ್ಯಾಂಕ್ ಪಡೆದಿದ್ದಾರೆ.
ಅಲ್ದೇ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಮತಾ ಅವರು 587 ಅಂಕಗಳನ್ನು ಪಡೆದು ರಾಜ್ಯಕ್ಕೆ 14ನೇ ರ್ಯಾಂಕ್ ಗಳಿಸಿದ್ದಾರೆ. ಇವರಷ್ಟೆ ಅಲ್ಲದೇ ಇನ್ನೂ 6 ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಒಟ್ಟು 9 ರ್ಯಾಂಕ್ ಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದುಕೊಟ್ಟಿದ್ದಾರೆ.
READ THIS : PUC ಫಲಿತಾಂಶದಲ್ಲಿ ವಿಜಯ ಪತಾಕೆ ಹಾರಿಸಿದ ವಿಜಯ ಪಿಯು ಕಾಲೇಜು
ಹೂಗುಚ್ಛ ನೀಡಿ ವಿದ್ಯಾರ್ಥಿಗಳಿಗೆ ಅಭಿನಂದನೆ
ಪಿಯು ರಿಸಲ್ಟ್ ಬೆನ್ನಲ್ಲೇ ಕಾಲೇಜಿನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಮಾಂತೇಶ್ ಅವರು ಎಲ್ಲಾ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಶಿಕ್ಷಕರ ಮಾರ್ಗದರ್ಶನ ನಮ್ಮ ಯಶಸ್ಸಿಗೆ ಕಾರಣ
ಇನ್ನು, ರ್ಯಾಂಕ್ ಪಡೆದ ವಿದ್ಯಾರ್ಥಿಗಳು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದು, ನಮ್ಮ ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲವೇ ನಮ್ಮ ಯಶಸ್ಸಿಗೆ ಕಾರಣ ಎಂದ್ರು. ಭವಿಷ್ಯದಲ್ಲಿ ಇನ್ನೂ ದೊಡ್ಡ ಸಾಧನೆ ಮಾಡುವ ಗುರಿ ಹೊಂದಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ರು.
ಫಲಿತಾಂಶದಲ್ಲಿ ಗಮನಾರ್ಹ ಸಾಧನೆ
ಒಟ್ಟಾರೆ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, 9 ರ್ಯಾಂಕ್ ಗಳೊಂದಿಗೆ ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೂ ತನ್ನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ̤
MUST WATCH : ವಿದ್ಯಾರ್ಥಿಗಳ ಸಾಧನೆ – RANK STUDENTSಗೆ ಸನ್ಮಾನ | TUMAKURU PU TOPPERS





