Suicide : ಪಿಯು ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿದ್ದಕ್ಕೆ – ಮನನೊಂದು ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು.!

ಕಳೆದ ಎರಡು ದಿನಗಳ ಹಿಂದಷ್ಟೇ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ಮನನೊಂದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು Suicide ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಉಣಕಲ್ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ಶ್ರಾವಣಿ ಮಾರುತಿ ಕಾಳೆ ಎಂಬ ವಿದ್ಯಾರ್ಥಿನಿ ಮೃತ ದುರ್ದೈವಿ.
100ಕ್ಕೆ 78 ಪರ್ಸೆಂಟ್ ರಿಸಲ್ಟ್
ಇನ್ನು ಮೃತ ಶ್ರಾವಣಿ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಕನಸು ಕಂಡಿದ್ದಳು. ಅದರಂತೆ 600ಕ್ಕೆ 600 ಅಂಕಗಳನ್ನು ಪಡೆಯುವ ಗುರಿಯನ್ನು ಇಟ್ಟುಕೊಂಡಿದ್ದಳು. ಆದ್ರೆ, ಫಲಿತಾಂಶದಲ್ಲಿ 100ಕ್ಕೆ 78 ಪರ್ಸೆಂಟ್ ಅಂಕ ಬಂದಿದ್ದು ಅವಳಿಗೆ ಸಮಾಧಾನ ತಂದಿರಲಿಲ್ಲ. ಹೀಗಾಗಿ ಫಲಿತಾಂಶ ಪ್ರಕಟವಾದ ಬಳಿಕ ಯಾರೊಂದಿಗೂ ಮಾತನಾಡದೇ ನೇರವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
READ THIS : ಕೊಪ್ಪಳದಲ್ಲೂ ‘Love Jihad’ – ಹಿಂದೂ ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

Suicide – ಯಾವ ಮಕ್ಕಳು ಈ ರೀತಿಯ ನಿರ್ಧಾರ ತೆಗೆದುಕೊಳ್ಳಬೇಡಿ
ಇನ್ನು ಶ್ರಾವಣಿಯ ತಂದೆ ಆಟೋ ಚಾಲಕರಾಗಿದ್ದು, ಮನೆಯಲ್ಲಿ ಓದುವ ವಾತಾವರಣ ಇಲ್ಲದ ಕಾರಣ ಶ್ರಾವಣಿ ತನ್ನ ಅಜ್ಜಿ-ತಾತನ ಮನೆಯಲ್ಲಿ ವಾಸವಿದ್ದು ಓದುತ್ತಿದ್ದಳು. ಶ್ರಾವಣಿ ತುಂಬಾ ಚೆನ್ನಾಗಿ ಓದುತ್ತಿದ್ದಳು. ಅದ್ರೆ ನಿರೀಕ್ಷಿಸಿದಷ್ಟೂ ಅಂಕ ಬಂದಿಲ್ಲವೆಂದು ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದಯವಿಟ್ಟು ಯಾವ ಮಕ್ಕಳು ಈ ರೀತಿಯ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

MUST WATCH : ಗಡಿನಾಡು ಪಾವಗಡದಲ್ಲಿ ನೀರಿಗೆ ಸಂಕಷ್ಟ – ಸೋಶಿಯಲ್ ಮೀಡಿಯಾದಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ..!




