Mysuru : ಮಂಗಳಮುಖಿಯರ ಕರಾಳ ದಂಧೆಯ ಮತ್ತೊಂದು ಮುಖ ಬಯಲು..!

ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್ ವರ್ಕ್, ರೀಲ್ಸ್ ಗಳಲ್ಲಿ ಬಳಸಿ,ಲಕ್ಷಾಂತರ ಹಣಗಳಿಸಿರು ಗಂಭೀರ ಆರೋಪ ಕೇಳಿ ಬಂದಿದೆ.
Mysuru ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್ಗೆ ಬಳಸಿಕೊಂಡಿರುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.
READ THIS : ಮೊದಲ ಪತ್ನಿ ಗರ್ಭಿಣಿಯಾದಾಗಲೇ ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ! ಈತನ ರಾಸಲೀಲೆ ಒಂದೆರಡಲ್ಲ
CM ತವರಲ್ಲೇ ಆಘಾತಕಾರಿ ಪ್ರಕರಣ ಬೆಳಕಿಗೆ
ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಈ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾನೆ. ಇನ್ನು ಮಂಗಳಮುಖಿಯ ಕಿರುಕುಳಕ್ಕೆ ಬೇಸತ್ತ ಯುವಕ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾನೆ. ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅನಿಲ್ ಕುಮಾರ್ಗೆ ಮಂಗಳಮುಖಿ ಅನಿತಾ ಮತ್ತು ತಂಡ ಪರಿಚಯವಾಗಿತ್ತು. ನಂತರ ಆತನನ್ನು ಬಲವಂತವಾಗಿ ಕಿಡ್ನಾಪ್ ಮಾಡಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆತನಿಗೆ ಬಲವಂತವಾಗಿ ಸೀರೆ, ನೈಟಿ ತೊಡಿಸಿ, ಕಿವಿ ಓಲೆ ಹಾಕಿಸಿ ಅಕ್ಷತಾ ಎಂದು ಹೆಸರಿಟ್ಟು ಮಂಗಳಮುಖಿಯಾಗಿ ವೇಷ ಬದಲಿಸಿದ್ದರಂತೆ.

ಸೆಕ್ಸ್ ವರ್ಕ್ಸ್ ಬಳಸಿಕೊಂಡಿದ್ದಾರೆ
ಅನಿಲ್ನನ್ನು ಮಂಗಳಮುಖಿ ರೀತಿ ಬದಲಾಯಿಸಿ ಬೀದಿಗಳಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿ ನಿತ್ಯ 2 ರಿಂದ 3 ಸಾವಿರ ರೂಪಾಯಿ ಕಲೆಕ್ಷನ್ ಮಾಡಿಸುತ್ತಿದ್ದರು.
ಅಷ್ಟೇ ಅಲ್ಲದೆ, ಮಂಗಳೂರು ಮತ್ತು ಕೇರಳದ ವಿವಿಧ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್ಸ್ ಬಳಸಿಕೊಂಡಿದ್ದಾರೆ ಎಂದು ಅನಿಲ್ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಲಿಂಗ ಬದಲಾವಣೆ ಮಾಡಲು ಸ್ಕೆಚ್
ಇತ್ತ ಅನಿಲ್ನನ್ನು ಮುಂಬೈಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತವಾಗಿ ಲಿಂಗ ಬದಲಾವಣೆ ಮಾಡಲು ಮಂಗಳಮುಖಿಯರ ಗ್ಯಾಂಗ್ ಸ್ಕೆಚ್ ಹಾಕಿತ್ತಂತೆ. ಮಂಗಳೂರಿನಲ್ಲಿ ಮಂಗಳಮುಖಿಯರ ಗ್ಯಾಂಗ್ನಿಂದ ತಪ್ಪಿಸಿಕೊಂಡು ಬಂದು ಅನಿಲ್ ತನ್ನ ಮನೆ ಸೇರಿದ್ದ.
ಆದ್ರೆ ಅನಿತಾ ಆಗಾಗೆ ಅನಿಲ್ಗೆ ಮಾನಸಿಕವಾಗಿ ಕಿರುಕುಳ ನೀಡ್ತಾ ಇದ್ದು, ಇದ್ರಿಂದ ಬೇಸತ್ತ ಅನಿಲ್ ನಂಜನಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದ.
ಆದರೆ ಪೊಲೀಸರು ಸ್ಪಂದಿಸದ ಹಿನ್ನೆಲೆ ಮೈಸೂರಿನ ಲಷ್ಕರ್ ಠಾಣೆಗೆ ಅನಿಲ್ ದೂರು ನೀಡಿ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ.

MUST WATCH : ಹೆಸರಿಗೆ ಮಾತ್ರ HIGHTECH BUS STAND – ಆದ್ರೆ ಪ್ರಯಾಣಿಕರಿಗೆ ಕುಡಿಯಲು ನೀರೇ ಇಲ್ಲ..!




