Davanagere : ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್ ಕೊಟ್ಟ ಧರ್ಮದರ್ಶಿ ಸಮಿತಿ.

ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ.
12 ಜನ ಈ ನಿರ್ಧಾರಕ್ಕೆ ಸಹಮತ
ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ.
ಸಭೆಯಿಂದ ನಾನು ಹೊರಬಂದಿದ್ದೇನೆ
ಆದರೆ ಈ ನಿರ್ಧಾರಕ್ಕೆ ಸಂಸ್ಥಾಪಕ ಟ್ರಸ್ಟಿ ಎಚ್. ಪಿ. ಬಸವರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆ ನಡೆಯುತ್ತಿದ್ದ ವೇಳೆ ಅಸಮಾಧಾನ ವ್ಯಕ್ತಪಡಿಸಿ ಅವರು ಹೊರನಡೆದಿದ್ದಾರೆ. ಧರ್ಮದರ್ಶಿ ಸಮಿತಿಯ ಕ್ರಮದ ಬಗ್ಗೆ ಅವರು ಕಿಡಿ ಕಾರಿದ್ದು, ನಿರ್ಧಾರಕ್ಕೆ ತಮ್ಮ ವಿರೋಧವಿದೆ ಎಂದು ಹೇಳಿದ್ದಾರೆ., ಸಭೆ ಕರೆಯುವ ಏಳು ದಿನ ಮೊದಲು ಧರ್ಮದರ್ಶಿ ಸಮಿತಿ ಸದಸ್ಯರಿಗೆ ನೋಟಿಸ್ ಕೊಡಬೇಕು. ಆದ್ರೆ ತಡ ರಾತ್ರಿ ಬಂದು ಸ್ವಾಮೀಜಿಗಳು ಇರುವ ಮಠದ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದಾರೆ. ಜೊತೆಗೆ ಸ್ವಾಮೀಜಿ ವಿರುದ್ಧ ಇರುವ ಆರೋಪ ಪಟ್ಟಿ ಕೊಡಬೇಕು. ಇದ್ಯಾವುದನ್ನೂ ಮಾಡದೆ ಧರ್ಮದರ್ಶಿ ಸಮಿತಿ ಸಭೆ ನಡೆಸಿದೆ ಎಂಬ ಆರೋಪವೂ ಕೇಳಿಬಂದಿದೆ.

READ THIS : ಯುವಕನ ಕಿಡ್ಯ್ನಾಪ್ – ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…!
ಹೈಡ್ರಾಮ ಸೃಷ್ಟಿ – Davanagere
ಬೆಳ್ಳಗ್ಗೆಯಿಂದಲೇ ಪಂಚಮಸಾಲಿ ಮಠದ ಆವರಣದಲ್ಲಿ ತೀವ್ರ ಗೊಂದಲ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಭಕ್ತರು ಮತ್ತು ಧರ್ಮದರ್ಶಿ ಮಂಡಳಿ ನಡುವಿನ ಸಂಘರ್ಷ ಹೈಡ್ರಾಮವನ್ನೇ ಸೇಷ್ಟಿಸಿತ್ತು.
Davanagere – ನಿಷೇಧಾಜ್ಞೆ ಜಾರಿ
ಇನ್ನು ಪರಿಸ್ಥಿತಿ ನಿಯಂತ್ರಣಕ್ಕೆ ತಹಶೀಲ್ದಾರ್ ಸಂತೋಷ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಮಠದ ಗೇಟ್ ಬಳಿ ಭಕ್ತರನ್ನು ತಡೆದು ನಿಲ್ಲಿಸಲಾಗಿದ್ದು, 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

MUST WATCH : ತವರಿನಲ್ಲಿ ರಾಜಣ್ಣ ಬರ್ತಡೇ ಸೆಲೆಬ್ರೇಷನ್ ಕೇಕ್ ಕತ್ತರಿಸಿ ಸಂಭ್ರಮಿಸಿದ ಫ್ಯಾನ್ಸ್




