Kolar ಜಿಲ್ಲೆಯ ಕೆಜಿಎಫ್ ಬಳಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇಯಲ್ಲಿ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Kolar : ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಡಿವೈಡರ್ಗೆ ಡಿಕ್ಕಿಯಾದ ಕಾರು ಹಲವು ಬಾರಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
MUST READ : RCB vs MI : ತವರಲ್ಲೇ ಮುಂಬೈಗೆ ನೀರು ಕುಡಿಸಿದ RCB..!!

ಕೋಲಾರ ಜಿಲ್ಲೆಯ KGF ಬಳಿ ಅಪಘಾತ
ಈ ಅಪಘಾತವು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ನಡೆದಿದೆ.ಘಟನೆಯಲ್ಲಿ ಚೆನ್ನೈ ಮೂಲದ ದೇವಾನಂದ್ (24) ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದೇ ವೇಳೆ,ಸರ್ವೇಶ್ ಎಂಬ ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನಿಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಶಂಕೆ
ಇಂದು ಮುಂಜಾನೆ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕ್ರೇಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ನಾಲ್ಕು-ಐದು ಬಾರಿ ಪಲ್ಟಿಯಾಗಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಹೀಗಾಗಿ,ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರ ಪರಿಶೀಲನೆ – ಪ್ರಕರಣ ದಾಖಲು
ಘಟನೆಯ ಮಾಹಿತಿ ತಿಳಿದು ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅದೇ ವೇಳೆ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪೊಲೀಸರು ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
MUST WATCH : PARAM ಹೋಗೋ ಕಡೆಗಳೆಲ್ಲಾ ಪ್ರತಿಭಟನೆಯ ಬಿಸಿ – ಸಚಿವರಿಗೆ KRS ಪಕ್ಷದಿಂದ ಎಚ್ಚರಿಕೆ | TUMAKURU NEWS |




