
BENGALURU : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಕಾವೇರಿ ನಿವಾಸದಿಂದ ಹೊರಟ ಸಿಎಂ ಸಿದ್ದರಾಮಯ್ಯ ಮೊದಲಿಗೆ ವಿಂಡ್ಸರ್ ಮ್ಯಾನರ್ ಬಳಿ ಇರುವ ರಸ್ತೆಗೆ ಭೇಟಿ ನೀಡಿ ರಸ್ತೆ ದುರಸ್ತಿ ಕಾರ್ಯಗಳ ಅವಲೋಕನೆ ನಡೆಸಿದರು. ಬಳಿಕ ವಿಬ್ ಗಯರ್ ರಸ್ತೆಗೆ ತೆರಳಿ, ಅಲ್ಲಿನ ರಸ್ತೆ ಗುಂಡಿ ಮುಚ್ಚುವ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು. ಇಂದು ಅನೇಕ ಏರಿಯಾಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀ ಶ್, ಬಿಬಿಎಂಪಿ ಆಯುಕ್ತ ಮಹೇಶ್ವರ ರಾವ್, ಬಡಾವಣೆ ಅಭಿವೃದ್ಧಿ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಇತರ ಉನ್ನತ ಅಧಿಕಾರಿಗಳು ಸಿಎಂ ಅವರೊಂದಿಗೆ ಸಹ ಭಾಗಿಯಾಗಿ ಸ್ಥಳ ಪರಿಶೀಲನೆ ನಡೆಸಿದರು.





