ಹೊಸಕೋಟೆಯಲ್ಲಿ ವ್ಯಕ್ತಿಯ Murder – ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರ ಹರಸಾಹಸ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಭೀಕರ Murder ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಪರಿಚಿತ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಇತ್ತ ಭೀಕರ ಕೊಲೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
READ THIS : IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ತಡರಾತ್ರಿ ಮನೆ ಹೊರಗಡೆ ಶಿವಶಂಕರ್ ಎಂಬಾತ ಫೋನ್ನಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ಮಾಡಿದ್ದಾರೆ. ಕಿಡಿಗೇಡಿಗಳು ಮಚ್ಚಿನಿಂದ ಶಿವಶಂಕರ್ ಕುತ್ತಿಗೆಯ ಭಾಗಕ್ಕೆ ಹೊಡೆದು ಹಾಕಿದ್ದು, ತೀವ್ರ ರಕ್ತಸ್ರಾವದಿಂದ ಬಿದ್ದು ಒದ್ದಾಡಿದ ಶಿವಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಕೊಲೆಯಾದ ವ್ಯಕ್ತಿ ಶಿವಶಂಕರ್ ನರಸಾಪುರ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Murder – ಪ್ರಕರಣ ದಾಖಲು
ಇನ್ನು ಭೀಕರ ಕೊಲೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಭೀಕರ ಕೊಲೆಗೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿತ್ತು. ಸ್ಥಳಕ್ಕೆ ಶ್ವಾನದಳ ಮತ್ತು ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸದ್ಯ ಈ ಸಂಬಂಧ ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
MUST WATCH : ರಾಜ್ಯ ರಾಜಕಾರಣಕ್ಕೆ ಹೆಚ್ಡಿಕೆ ಮರಳುತ್ತಾರಾ..?- ಸಿಎಂ ಆಗುವ ಆಸೆ ಬಿಚ್ಚಿಟ್ರಾ ದಳಪತಿ?





