2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಖಾತೆ ತೆರೆಯದ ಕೆಕೆಆರ್ (KKR) ನಾಯಕನಿಗೆ ಮತ್ತೊಂದು ಶಾಕ್ ಎದುರಾಗಿದೆ.

ಐಪಿಎಲ್ 2026ರ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
KKR ನಾಯಕನಿಗೆ ಶಾಕ್
ನೆನ್ನೆ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ನಿಗದಿತ ಸಮಯದೊಳಗೆ ತನ್ನ ಓವರ್ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಪ್ರಸಕ್ತ ಸೀಸನ್ನಲ್ಲಿ ಕೆಕೆಆರ್ ತಂಡದ ಮೊದಲ ತಪ್ಪಾದ ಕಾರಣ ನಾಯಕನಿಗೆ 12 ಲಕ್ಷ ರೂ.ಗಳ ದಂಡ ವಿಧಿಸಿ ಐಪಿಎಲ್ ಆಡಳಿತ ಮಂಡಳಿ ಆದೇಶಿಸಿದೆ.
READ THIS : ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ – ಕಳೆಗಟ್ಟಿದ ಹಬ್ಬದ ಸಂಭ್ರಮ

ನಿಯಮಗಳು ಹೇಗಿವೆ?
ಒಮ್ಮೆ ಸ್ಲೋ ಓವರ್ ರೇಟ್ ತಪ್ಪು ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದೇ ತಪ್ಪನ್ನು ಎರಡನೇ ಬಾರಿ ಮರುಕಳಿಸಿದರೆ 24 ಲಕ್ಷ ರೂ. ದಂಡದ ಜೊತೆಗೆ ಪ್ಲೇಯಿಂಗ್ ಇಲೆವೆನ್ನ ಆಟಗಾರರಿಗೂ 6 ಲಕ್ಷ ಅಥವಾ ಅವರ ಪಂದ್ಯ ಶುಲ್ಕದ 25% ದಂಡ ವಿಧಿಸಲಾಗುತ್ತದೆ.
ಮೂರನೇ ಬಾರಿ ಇದೇ ತಪ್ಪು ನಡೆದರೆ ನಾಯಕನಿಗೆ 30 ಲಕ್ಷ ರೂ. ದಂಡ ವಿಧಿಸುವುದರ ಜೊತೆಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ.
ಅಲ್ಲದೆ, ಪ್ಲೇಯಿಂಗ್ ಇಲೆವೆನ್ನ ಉಳಿದ ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯ ಶುಲ್ಕದ 50% ದಂಡ ವಿಧಿಸಲಾಗುತ್ತದೆ.

ಡಿಮೆರಿಟ್ ಪಾಯಿಂಟ್ಗಳು ನಿರ್ದಿಷ್ಟ ಮಿತಿಯನ್ನು ಮೀರಿದಾಗ ಮಾತ್ರ ನಾಯಕನಿಗೆ ಪಂದ್ಯ ನಿಷೇಧ ವಿಧಿಸಲಾಗುತ್ತದೆ. ಅಂದರೆ ಗಂಭೀರ ಅಥವಾ ಪುನರಾವರ್ತಿತ ತಪ್ಪುಗಳ ಸಂದರ್ಭದಲ್ಲಿ ಮಾತ್ರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ಸೋಲಿನಿಂದ ಕಂಗೆಟ್ಟ KKR
ಐಪಿಎಲ್ 2026 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ 4 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.
MUST WATCH : ಕೇವಲ 15 ವಯಸ್ಸಿಗೆ ಸಚಿನ್ ದಾಖಲೆಯನ್ನೇ ಉಡೀಸ್ ಮಾಡಿದ ಪೋರ





