ಸಿದ್ದು ಬಣಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟ D. K. Shivakumar – ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಪಕ್ಷದಿಂದ ಅಮಾನತು.

ದಾವಣಗೆರೆ ಉಪಚುನಾವಣೆ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಮಹತ್ತರ ಬೆಳವಣಿಗೆಗಳು ಮುಂದುವರೆಯುತ್ತಲೇ ಇದ್ದು, ಸಿದ್ದು ಬಣಕ್ಕೆ ಡಿಕೆಶಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಅಲ್ದೇ ಪಕ್ಷದಲ್ಲಿ ಎದ್ದಿದ್ದ ಬಂಡಾಯಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಪಕ್ಷದಿಂದ ಅಮಾನತು
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಕೆಪಿಸಿಸಿ ಅಧ್ಯಕ್ಷ D. K. Shivakumar ಅಮಾನತುಗೊಳಿಸಿದ್ದಾರೆ.
READ THIS : 5 ದಿನ ಹೀಟ್ ವೇವ್ ಎಚ್ಚರಿಕೆ – ರಾಜ್ಯದಲ್ಲಿ ಇನ್ನಷ್ಟು ಹೆಚ್ಚಾಗಲಿದೆ ಬಿಸಿಲು.!

ಇದೀಗ ಇಬ್ಬರ ತಲೆದಂಡ
ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಸಮಾಧಾನಕ್ಕೆ ಕಾರಣ ಆಗಿದ್ದವರ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕೆ ಕಾಂಗ್ರೆಸ್ ಮೂವರು ಮುಸ್ಲಿಂ ನಾಯಕರ ಪೈಕಿ ಇದೀಗ ಇಬ್ಬರ ತಲೆದಂಡವಾಗಿದೆ. ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಇತ್ತ ಸಚಿವ ಜಮೀರ್ನನ್ನು ಸಿಎಂ ಮನೆಗೆ ಕರೆಸಿಕೊಂಡು ಅವರಿಗೂ ಕ್ಲಾಸ್ ತಗೊಂಡಲಾಗಿತ್ತು ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ನಾಯಕರೇ ಬಲ
ಇದೀಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಣಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ನಾಯಕರೇ ಬಲ, ಮುಸ್ಲಿಂರಿಗೂ ಕಾಂಗ್ರೆಸ್ ಬೇಕು, ಅದರೂ ಇಂತಹ ಚಟುವಟಿಕೆ ನಡೆದಿರುವುದು ರಾಜಕೀಯ ಪಾಲಯದಲ್ಲಿ ದೊಡ್ಡ ಅಚ್ಚರಿಯನ್ನೇ ಮೂಡಿಸಿದೆ.
MUST WATCH : ಮಹಿಳಾ ಮೀಸಲಾತಿ ಜಾರಿ ಆಗಬೇಕಾ ಸರ್ ಕಾಂಗ್ರೆಸ್ನ ನಿಲುವಿನ ಬಗ್ಗೆ ರಾಜಣ್ಣ ಏನಂದ್ರು





