ಯಶ್ ಅಭಿನಯದ ‘Toxic ’’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತದೆಯೇ ಎಂಬ ಅನುಮಾನಕ್ಕೆ ನಟಿ ತಾರಾ ಸುತಾರಿಯಾ ಸ್ಪಷ್ಟನೆ ನೀಡಿದ್ದಾರೆ.

‘ರಾಕಿಂಗ್ ಸ್ಟಾರ್’ Yash ಅಭಿನಯದ ಬಹುನಿರೀಕ್ಷಿತ Toxic ಸಿನಿಮಾ ಮತ್ತೆ ಮುಂದೂಡಿಕೆಯಾಗಲಿದೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದವು.
ಜೂನ್ 4ರಂದು ಸಿನಿಮಾ ಬಿಡುಗಡೆ ಆಗುತ್ತದೆಯೇ ಇಲ್ಲವೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಇದೀಗ ಈ ಎಲ್ಲಾ ಗೊಂದಲಗಳಿಗೆ ನಟಿ Tara Sutaria (ತಾರಾ ಸುತಾರಿಯಾ) ಸ್ಪಷ್ಟನೆ ನೀಡಿ, ಸಿನಿಮಾ ನಿಗದಿತ ದಿನಾಂಕದಲ್ಲೇ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಜೂನ್ 4ಕ್ಕೆ ‘ಟಾಕ್ಸಿಕ್’ ರಿಲೀಸ್ ಖಚಿತ – ತಾರಾ ಸುತಾರಿಯಾ ಹೇಳಿಕೆ
ಇತ್ತೀಚೆಗೆ ಬಾಲಿವುಡ್ನ ಖ್ಯಾತ ನಿರ್ದೇಶಕಿ ಹಾಗೂ ನೃತ್ಯ ಸಂಯೋಜಕಿ Farah Khan (ಫರ್ಹಾ ಖಾನ್) ಅವರ ಯೂಟ್ಯೂಬ್ ವ್ಲಾಗ್ನಲ್ಲಿ ತಾರಾ ಸುತಾರಿಯಾ ಅತಿಥಿಯಾಗಿ ಭಾಗವಹಿಸಿದ್ದರು.
ಈ ವೇಳೆ ಅವರು ತಮ್ಮ ವೃತ್ತಿಜೀವನದ ಬಗ್ಗೆ ಮಾತನಾಡುತ್ತಾ, ಟಾಕ್ಸಿಕ್’ ಸಿನಿಮಾ ಜೂನ್ 4ರಂದು ತೆರೆಗೆ ಬರಲಿದೆ” ಎಂದು ಖಚಿತಪಡಿಸಿದ್ದಾರೆ.
ಈ ಹೇಳಿಕೆಯಿಂದಾಗಿ ಅಭಿಮಾನಿಗಳಲ್ಲಿ ಮನೆಮಾಡಿದ್ದ ಆತಂಕ ದೂರವಾಗಿದ್ದು, ಚಿತ್ರತಂಡ ಹಳೆಯ ಯೋಜನೆಯಂತೆಯೇ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ ಎಂಬುದು ಸ್ಪಷ್ಟವಾಗಿದೆ.
MUST READ : Gold & Silver Rate : ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ..!!

ಬಿಡುಗಡೆ ಮುಂದೂಡಿಕೆಗೆ ಕಾರಣವೇನು?
ಮೂಲತಃ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆಯಾಗಬೇಕಿತ್ತು.
ಆದರೆ ಮಧ್ಯಪ್ರಾಚ್ಯದಲ್ಲಿ ನಡೆದ Iran–Israel conflict (ಇರಾನ್–ಇಸ್ರೇಲ್ ಸಂಘರ್ಷ) ಹಿನ್ನೆಲೆಯಲ್ಲಿ ಪರಿಸ್ಥಿತಿ ಅಸ್ಥಿರವಾಗಿದ್ದ ಕಾರಣ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಿತ್ತು.
ಇದರಿಂದಾಗಿ ಸಿನಿಮಾ ಮತ್ತೆ ಮುಂದೂಡಿಕೆಯಾಗುತ್ತದೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿತ್ತು.
ಆದರೆ ಈಗ ತಾರಾ ಸುತಾರಿಯಾ ನೀಡಿದ ಸ್ಪಷ್ಟನೆ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದೆ.
‘ಟಾಕ್ಸಿಕ್’ ಸಿನಿಮಾವನ್ನು ಖ್ಯಾತ ನಿರ್ದೇಶಕಿ Geetu Mohandas (ಗೀತು ಮೋಹನ್ ದಾಸ್) ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.
ಈ ಚಿತ್ರದಲ್ಲಿ ನಾಯಕ ನಟ ಯಶ್ ಕೂಡ ಕಥಾ ರೂಪಿಸುವಲ್ಲಿ ಸಹಕಾರ ನೀಡಿದ್ದಾರೆ.
ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ.
MUDST WATCH : WEATHER | ಆಚೆ ಬರುವ ಮುನ್ನ ಹುಷಾರ್ ರಾಜ್ಯದಲ್ಲಿ ಇನ್ನಷ್ಟು ಹೆಚ್ಚಾಗಲಿದೆ ಬಿಸಿಲು




