Mantralaya ಸಮೀಪ ಬುಲೆರೋ ಮತ್ತು ಸಿಮೆಂಟ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿ 8 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Mantralaya : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಸಮೀಪ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಒಟ್ಟು 8 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ
ಇಂದು (ಏ.16) ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ, ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಬುಲೆರೋ ವಾಹನಕ್ಕೆ ಎದುರುಗಡೆಯಿಂದ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಪ್ರಯಾಣಿಸುತ್ತಿದ್ದವರಲ್ಲಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
MUST READ : Dina Bhavishya : ದಿನ ಭವಿಷ್ಯ 16 ಏಪ್ರಿಲ್ 2026..

ಮೃತರ ವಿವರ
ಈ ದುರ್ಘಟನೆಯಲ್ಲಿ ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಮತ್ತು ಮೀನಾಕ್ಷಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬ ಸದಸ್ಯರ ಸಾವಿನಿಂದ ಸಂಬಂಧಿಕರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಇತರರನ್ನು ತಕ್ಷಣವೇ ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ನಿಗಾ ವಹಿಸಿ ಚಿಕಿತ್ಸೆ ಮುಂದುವರಿಸಿದ್ದಾರೆ.

ಈ ಘಟನೆ ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ.
MUST WATCH : ಕಂಪನಿಯಲ್ಲಿ ಊಟ ಸೇವಿಸಿ 50ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ




