Karnataka Weather : ಏರುತ್ತಿರುವ ಬಿಸಿಲಿನ ತಾಪಮಾನ – ಬೇಗೆಯಿಂದ ತಪ್ಪಿಸಿಕೊಳ್ಳಲು ಟಿಪ್ಸ್.

Karnataka Weather : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ನೆನ್ನೆ ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷದ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಕಾಣಿಸಿಕೊಳ್ಳುವ ಇಂತಹ ತೀವ್ರ ಬಿಸಿಲು, ಈ ಬಾರಿ ಏಪ್ರಿಲ್ನಲ್ಲೇ ದಾಖಲಾಗಿದೆ.
12 ಜಿಲ್ಲೆಗಳಿಗೆ ಬಿಸಿಗಾಳಿ ಎಚ್ಚರಿಕೆ
ಹವಾಮಾನ ಇಲಾಖೆ ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ತೀವ್ರ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳು ಬಿಸಿಗಾಳಿ ಪೀಡಿತ ಪ್ರದೇಶಗಳಾಗಿವೆ.
ಜನರಿಗೆ ಮಾರ್ಗಸೂಚಿಗಳು
ತೀವ್ರ ಬಿಸಿಲಿನ ಹಿನ್ನೆಲೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ಏನು ಮಾಡಬೇಕು?
ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರು, ಮಜ್ಜಿಗೆ, ಎಳೆನೀರು ಮತ್ತು ಹಣ್ಣಿನ ರಸಗಳನ್ನು ಸೇವಿಸಬೇಕು. ತೆಳುವಾದ ಹತ್ತಿ ಬಟ್ಟೆಗಳನ್ನು ಧರಿಸಿ, ಹೊರಹೋಗುವಾಗ ಛತ್ರಿ ಅಥವಾ ಟೋಪಿ ಬಳಸಬೇಕು.
ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಸಾಧ್ಯವಾದಷ್ಟು ಹೊರಗೆ ಹೋಗುವುದನ್ನು ತಪ್ಪಿಸುವುದು ಒಳಿತು. ಆರೋಗ್ಯದ ದೃಷ್ಟಿಯಿಂದ ಸ್ವಚ್ಛ ಆಹಾರ ಸೇವನೆಗೆ ಆದ್ಯತೆ ನೀಡಬೇಕು.
READ THIS : ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ..!
ಏನು ಮಾಡಬಾರದು?
ಅತಿಯಾದ ಕಾಫಿ, ಟೀ, ಮದ್ಯಪಾನ ಹಾಗೂ ಕಾರ್ಬೋನೇಟೆಡ್ ಪಾನೀಯಗಳನ್ನು ಸೇವಿಸಬಾರದು. ರಸ್ತೆ ಬದಿಯ ಕತ್ತರಿಸಿದ ಹಣ್ಣುಗಳು ಮತ್ತು ಮಸಾಲೆಯುಕ್ತ ಆಹಾರಗಳನ್ನು ತಪ್ಪಿಸಬೇಕು. ಬಿಸಿಲಿನಿಂದ ಬಂದ ತಕ್ಷಣ ತಣ್ಣೀರು ಬಳಸಿ ಸ್ನಾನ ಮಾಡುವುದನ್ನು ತಪ್ಪಿಸಬೇಕು.

ಶಾಖಾಘಾತದ ಲಕ್ಷಣಗಳು ಮತ್ತು ಚಿಕಿತ್ಸೆ
ವ್ಯಕ್ತಿ ಅಸಂಗತವಾಗಿ ಮಾತನಾಡುತ್ತಿದ್ದರೆ, ಅತಿಯಾದ ಸುಸ್ತು, ಚರ್ಮ ಕೆಂಪಾಗುವುದು ಅಥವಾ ಉಸಿರಾಟ ತೀವ್ರವಾಗಿದ್ದರೆ ಅದನ್ನು ಶಾಖಾಘಾತ ಎಂದು ಪರಿಗಣಿಸಿ.
ಇಂತಹ ಸಂದರ್ಭದಲ್ಲಿ ತಕ್ಷಣ ವ್ಯಕ್ತಿಯನ್ನು ನೆರಳಿಗೆ ಕರೆತಂದು, ಬಟ್ಟೆ ಸಡಿಲಗೊಳಿಸಿ, ಸಾಮಾನ್ಯ ನೀರಿನಿಂದ ಮೈ ಒರೆಸಬೇಕು. ತುರ್ತು ನೆರವಿಗಾಗಿ 104 ಸಂಖ್ಯೆಗೆ ಕರೆ ಮಾಡಿ ಅಥವಾ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ಇನ್ನು ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ಯಿಂದಿರಬೇಕಾಗುತ್ತದೆ.

MUST WATCH : ಆಚೆ ಬರುವ ಮುನ್ನ ಹುಷಾರ್ ರಾಜ್ಯದಲ್ಲಿ ಇನ್ನಷ್ಟು ಹೆಚ್ಚಾಗಲಿದೆ ಬಿಸಿಲು




