SSLC ಪರೀಕ್ಷೆಯಲ್ಲಿ ಹಿಂದೆ ಭಾಷೆಗೆ ಗ್ರೇಡ್ ವಿವಾದ – ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದ ಹೈಕೋರ್ಟ್.

SSLC ಪರೀಕ್ಷೆ ಆರಂಭವಾದ ಹೊತ್ತಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ಮುಂದಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯನ್ನ ಕೇವಲ ಗ್ರೇಡ್ಗೆ ಸೀಮಿತಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದರು. ಅದ್ರಂತೆ ಇನ್ಮುಂದೆ ವಿದ್ಯಾರ್ಥಿಗಳ ಫಲಿತಾಂಶವನ್ನ 625 ಅಂಕಗಳ ಬದಲು 525 ಅಂಕಗಳಿಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ರು. ಸರ್ಕಾರದ ನಿರ್ಧಾರದಿಂದ ರಾಜ್ಯಾದ್ಯಂತ ಪರ ವಿರೋಧ ಚರ್ಚೆಕ್ಕೆ ಕಾರಣವಾಗಿತ್ತು. ಇದೀಗ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ.
ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಹಾಗೂ ಒಟ್ಟು ಫಲಿತಾಂಶದ ಅಂಕಪಟ್ಟಿಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಸರ್ಕಾರದ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ದೊಡ್ಡ ಸಮಾಧಾನ ತಂದುಕೊಟ್ಟಿದೆ.
READ THIS : ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು
ಇನ್ನು ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ.
READ THIS : ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

SSLC ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ – ಹೈಕೋರ್ಟ್ ಬ್ರೇಕ್
ಒಟ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ನೀಡಲು ಹೊರಟ್ಟಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರ ಆತಂಕ ದೂರವಾಗಿದೆ.
MUST WATCH : ಅಯೋಧ್ಯೆಯಲ್ಲಿ CONGRESS ಶಾಸಕರು – RAMA LALLA ದರ್ಶನ ಪಡೆದು ಏನಂದ್ರು ?

MUST WATCH : ABDUL JABBAR | ಕಾಂಗ್ರೆಸ್ ಪಕ್ಷದಿಂದ ಶಿಸ್ತು ಕ್ರಮ ಜಾರಿ- ಸಿದ್ದು ಆಪ್ತ ಬಣದವರೇ ಪಕ್ಷದಿಂದ ಔಟ್




