Shivamogga ಜಿಲ್ಲೆಯ ಸಾಗರದ ಎಸ್ಎನ್ ನಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ನಾಗರಹಾವು ಕಚ್ಚಿ ಮೃತಪಟ್ಟ ದುರಂತ ಘಟನೆ ನಡೆದಿದೆ.

Shivamogga ಜಿಲ್ಲೆಯಲ್ಲಿ ಮನಕಲಕುವ ದುರಂತ ಸಂಭವಿಸಿದ್ದು, ಮನೆ ಮುಂದೆ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗು ಹಾವು ಕಚ್ಚಿ ಮೃತಪಟ್ಟ ಘಟನೆ ನಡೆದಿದೆ.ಈ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಎಸ್ಎನ್ ನಗರದಲ್ಲಿ ಬುಧವಾರ ನಡೆದಿದೆ.
ಮೃತ ಮಗುವನ್ನು ಭವಿನ್ ಎಂದು ಗುರುತಿಸಲಾಗಿದೆ.ಇವರು ಗಣೇಶ್ ಅವರ ಪುತ್ರನಾಗಿದ್ದು, ರಜೆ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಅಜ್ಜಿ ಮನೆಗೆ ಬಂದಿದ್ದರು.
ಈ ವೇಳೆ ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಕೈಗೆ ನಾಗರಹಾವು ಕಚ್ಚಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಹಾವು ಕಚ್ಚಿದ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆತಂಕಕ್ಕೊಳಗಾದರು.
MUST READ : RCB ನಮಗೆ ಅವಮಾನ ಮಾಡಿದ್ದಾರೆ..! ದೂರು ದಾಖಲಿಸಿದ CSK..

ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ
ಘಟನೆ ಸಂಭವಿಸಿದ ತಕ್ಷಣ ಮಗುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ, ವೈದ್ಯರ ಎಲ್ಲಾ ಪ್ರಯತ್ನಗಳಿಗೂ ಮಧ್ಯೆ, ಮಗು ಭವಿನ್ ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಮಗುವಿನ ಮರಣೋತ್ತರ ಪರೀಕ್ಷೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಈ ಘಟನೆ ಕುಟುಂಬದವರಲ್ಲಿ ದುಃಖದ ವಾತಾವರಣವನ್ನು ಉಂಟುಮಾಡಿದ್ದು, ಸ್ಥಳೀಯರು ಸಹ ಸಂತಾಪ ಸೂಚಿಸಿದ್ದಾರೆ.
MUST WATCH : ಕಂಪನಿಯಲ್ಲಿ ಊಟ ಸೇವಿಸಿ 50ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ




