Bangalore ನಗರದ ನೈಸ್ ರಸ್ತೆ ಸೋಂಪುರ ಸರ್ಕಲ್ ಸಮೀಪವಿರುವ ‘ಶುದ್ಧ ತಿಂಡಿ’ ಹೋಟೆಲ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಹೋಟೆಲ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಗಳೂರು ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನೈಸ್ ರಸ್ತೆ ಸಮೀಪವಿರುವ ಪ್ರಸಿದ್ಧ ‘ಶುದ್ಧ ತಿಂಡಿ’ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಗುರುವಾರ ಈ ಘಟನೆ ಸಂಭವಿಸಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಹೋಟೆಲ್ ಆವರಿಸಿಕೊಂಡು ಭಾರೀ ನಷ್ಟ ಉಂಟುಮಾಡಿದೆ.
ನಗರದ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಈ ಅಗ್ನಿ ಅವಘಡ ಸಂಭವಿಸಿದೆ.
ಇತ್ತೀಚೆಗಷ್ಟೇ ಅದ್ಧೂರಿಯಾಗಿ ಉದ್ಘಾಟನೆಗೊಂಡಿದ್ದ ಈ ಹೋಟೆಲ್ನಲ್ಲಿ ಎಂದಿನಂತೆ ಗ್ರಾಹಕರಿಗೆ ತಿಂಡಿ ತಯಾರಿಸುವ ಕಾರ್ಯ ನಡೆಯುತ್ತಿತ್ತು.
ಆದರೆ, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಹೋಟೆಲ್ ಸಂಪೂರ್ಣವಾಗಿ ಹೊತ್ತಿ ಉರಿಯತೊಡಗಿತು.
ಬೆಂಕಿಯ ತೀವ್ರತೆಗೆ ಹೋಟೆಲ್ನ ಪೀಠೋಪಕರಣಗಳು ಮತ್ತು ಅಡುಗೆ ಸಾಮಗ್ರಿಗಳು ಧಗಧಗನೆ ಉರಿದು ಭಸ್ಮವಾಗಿವೆ.
MUST READ : RCB ನಮಗೆ ಅವಮಾನ ಮಾಡಿದ್ದಾರೆ..! ದೂರು ದಾಖಲಿಸಿದ CSK..

ಶಾರ್ಟ್ ಸರ್ಕ್ಯೂಟ್ ಕಾರಣ ಎಂಬ ಪ್ರಾಥಮಿಕ ಮಾಹಿತಿ
ಪ್ರಾಥಮಿಕ ಮಾಹಿತಿಯ ಪ್ರಕಾರ, ಹೋಟೆಲ್ನ ಅಡುಗೆ ಮನೆಯಲ್ಲಿದ್ದ ಇಡ್ಲಿ ಸ್ಟೀಮರ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ (Short Circuit) ಈ ಅನಾಹುತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಸ್ಟೀಮರ್ನಿಂದ ಉಂಟಾದ ಕಿಡಿಗಳು ಹೋಟೆಲ್ನ ಇತರ ಭಾಗಗಳಿಗೆ ವೇಗವಾಗಿ ಹರಡಿದ ಕಾರಣ ಬೆಂಕಿ ನಿಯಂತ್ರಣಕ್ಕೆ ಸಿಗದಷ್ಟು ವ್ಯಾಪಿಸಿದೆ.
ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅದೃಷ್ಟವಶಾತ್ ಈ ಭೀಕರ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಬೆಂಕಿ ಹೊತ್ತಿಕೊಂಡ ತಕ್ಷಣ ಹೋಟೆಲ್ ಒಳಗಿದ್ದ ಸಿಬ್ಬಂದಿ ಮತ್ತು ಗ್ರಾಹಕರು ಸಮಯಪ್ರಜ್ಞೆ ಮೆರೆದು ಹೊರಗೆ ಓಡಿ ಬಂದಿದ್ದಾರೆ.ಇದರಿಂದ ದೊಡ್ಡ ಮಟ್ಟದ ಅಪಾಯ ತಪ್ಪಿದಂತಾಗಿದೆ.

ಅಗ್ನಿಶಾಮಕ ದಳದಿಂದ ಬೆಂಕಿ ನಂದನೆ – ಭಾರಿ ಆರ್ಥಿಕ ನಷ್ಟ
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಆದರೆ, ಹೋಟೆಲ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಮಾಲೀಕರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
MUST WATCH : ಕಂಪನಿಯಲ್ಲಿ ಊಟ ಸೇವಿಸಿ 50ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ




